Karnataka news paper

ಕಾಶ್ಮೀರ: ಅನಂತನಾಗ್‌ನಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು


PTI

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಶನಿವಾರ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಅಲಿ ಮೊಹಮ್ಮದ್ ಅವರು ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ಹಸನ್‌ಪೋರಾದಲ್ಲಿರುವ ಅವರ ನಿವಾಸದ ಬಳಿಯೇ ಸಂಜೆ 5:35 ರ ಸುಮಾರಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಜಮ್ಮು-ಕಾಶ್ಮೀರ: ಎಲ್ಇಟಿ, ಟಿಆರ್’ಎಫ್’ನ ಮೂವರು ಉಗ್ರರ ಬಂಧನ

ಚಿಂತಾಜನಕ ಸ್ಥಿತಿಯಲ್ಲಿದ್ದ ಮೊಹಮ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಈ ಪ್ರದೇಶವನ್ನು ಸಂಪೂರ್ಣ ಸುತ್ತುವರಿಯಲಾಗಿದೆ ಮತ್ತು ದಾಳಿಕೋರರನ್ನು ಹಿಡಿಯಲು ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ ಎಂದು ಅಧಿಕಾರಿ ಹೇಳಿದ್ದಾರೆ.



Read more

[wpas_products keywords=”deal of the day”]