Karnataka news paper

ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯದ ವೇಳೆ ಭೂಕಂಪ, ವಿಡಿಯೋ ವೈರಲ್


Online Desk

ಕೆರಿಬಿಯನ್: ಕೆರಿಬಿಯನ್ ದ್ವೀಪಗಳಲ್ಲಿ ನಡೆಯುತ್ತಿರುವ 2022ರ ಅಂಡರ್ 19 ಪುರುಷರ ವಿಶ್ವಕಪ್ ಆಟದ ಸಂದರ್ಭದಲ್ಲಿ ಭೂಕಂಪನ ಸಂಭವಿಸಿದೆ. ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್‌ನಲ್ಲಿ ಶನಿವಾರ ನಡೆದ ಐರ್ಲೆಂಡ್ ಮತ್ತು ಜಿಂಬಾಬ್ವೆ ನಡುವಿನ ಪಂದ್ಯದ ವೇಳೆ ಸುಮಾರು 20 ಸೆಕೆಂಡುಗಳ ಕಾಲ ಭೂಕಂಪ ಉಂಟಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.2 ರಷ್ಟಿತ್ತು ಎಂದು ವರದಿಯಾಗಿದೆ.

ಇದನ್ನು ಓದಿ: ಐಸಿಸಿ U-19 ವಿಶ್ವಕಪ್: ಬಾಂಗ್ಲಾ ಮಣಿಸಿ ಸೆಮಿಫೈನಲ್ ಗೆ ಜಿಗಿದ ಟೀಮ್ ಇಂಡಿಯಾ! ಫೈನಲ್ ಪ್ರವೇಶಕ್ಕಾಗಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಸೆಣಸು

ಆದರೆ, ಭೂಕಂಪದ ವೇಳೆ ಮೈದಾನದಲ್ಲಿದ್ದ ಆಟಗಾರರಿಗೆ ಈ ವಿಷಯ ಗಮನಕ್ಕೆ ಬಂದಿಲ್ಲ. ಜಿಂಬಾಬ್ವೆ ಇನ್ನಿಂಗ್ಸ್‌ನ ಆರನೇ ಓವರ್‌ನಲ್ಲಿ ಭೂಕಂಪ ಸಂಭವಿಸಿದೆ ಎಂದು ಕಾಮೆಂಟೆಟರ್‌ಗಳು ಹೇಳಿದ ಸ್ವಲ್ಪ ಸಮಯದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಭೂಕಂಪದ ವೇಳೆ ಕ್ಯಾಮೆರಾಗಳು ಅಲುಗಾಡುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಐರ್ಲೆಂಡ್ 8 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 48.4 ಓವರ್ ಗಳಲ್ಲಿ 166 ರನ್ ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನತ್ತಿದ ಐರ್ಲೆಂಡ್ ಕೇವಲ 2 ವಿಕೆಟ್ ಕಳೆದುಕೊಂಡು 32 ಓವರ್ ಗಳಲ್ಲಿ ಗುರಿ ತಲುಪಿತು. ಜಾಕ್ ಡಿಕ್ಸನ್ 78, ನಾಯಕ ಟಿಮ್ ಟೆಕ್ಟರ್ ಅಜೇಯ 76 ರನ್ ಗಳಿಸಿ ಐರ್ಲೆಂಡ್ ಗೆಲುವಿಗೆ ಕಾರಣರಾದರು.





Read more…

[wpas_products keywords=”deal of the day sports items”]