Karnataka news paper

ರಾಜ್ಯದಲ್ಲಿ ಇಂದು ಕೊರೋನಾಗೆ 68 ಬಲಿ: ಬೆಂಗಳೂರಿನಲ್ಲಿ 11,938 ಸೇರಿ 28,264 ಮಂದಿಗೆ ಪಾಸಿಟಿವ್


Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 28,264 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 37,85,295ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 68 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,942ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡಪ್ರಭ.ಕಾಮ್ ಯೂಟ್ಯೂಬ್ ಚಾನಲ್ ಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರಿನಲ್ಲಿ ಇಂದು 11,938 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,10,198ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ 14 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 29,244 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 34,95,239ಕ್ಕೆ ಏರಿಕೆಯಾಗಿದೆ. ಇನ್ನು 2,51,084 ಸಕ್ರಿಯ ಪ್ರಕರಣಗಳಿವೆ.





Read more

[wpas_products keywords=”deal of the day”]