Karnataka news paper

ವಾರದೊಳಗೆ ನಗರದ ಎಲ್ಲ ಅರ್ಹ ಹದಿಹರೆಯದವರಿಗೆ ಕೋವಿಡ್ ಲಸಿಕೆ: ಬಿಬಿಎಂಪಿ ಗುರಿ


The New Indian Express

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ನಿರ್ಬಂಧಗಳಲ್ಲಿ ಸಡಿಲಿಕೆ ತಂದ ಬೆನ್ನಲ್ಲೇ ಇತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೂಡ ತನ್ನ ಲಸಿಕೆ ನೀಡಿಕೆ ಗುರಿಯನ್ನು ತ್ವರಿತಗೊಳಿಸಲು ನಿರ್ಧರಿಸಿದ್ದು, ಇನ್ನೊಂದು ವಾರದೊಳಗೆ ಬೆಂಗಳೂರು ವ್ಯಾಪ್ತಿಯ ಎಲ್ಲ ಅರ್ಹ ಹದಿಹರೆಯದವರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಿದೆ.

ಶಾಲೆಗಳು ಮತ್ತೆ ಪ್ರಾರಂಭವಾಗಲಿದ್ದು, ಮುಂಬರುವ ದಿನಗಳಲ್ಲಿ 15 ರಿಂದ 17 ವರ್ಷದೊಳಗಿನ ಎಲ್ಲಾ ಅರ್ಹ ಹದಿಹರೆಯದವರಿಗೆ ಲಸಿಕೆ ಹಾಕಲು ಆರೋಗ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ಸಿಬ್ಬಂದಿ ಹೊಸ ಗುರಿಯನ್ನು ನಿಗದಿಪಡಿಸಿದ್ದಾರೆ. ಇಲ್ಲಿಯವರೆಗೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಅರ್ಹ ಹದಿಹರೆಯದವರಲ್ಲಿ ಶೇಕಡಾ 61 ರಷ್ಟು ಲಸಿಕೆ ಹಾಕಲಾಗಿದೆ.

ಎಲ್ಲಾ ಅರ್ಹ ಹದಿಹರೆಯದವರಿಗೆ ವಾರದೊಳಗೆ ಲಸಿಕೆ ಹಾಕಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ ಕೆ ವಿ ತ್ರಿಲೋಕ್ ಚಂದ್ರ ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಮೊದಲೇ ಗುರಿ ನಿಗದಿಪಡಿಸಲಾಗಿದ್ದರೂ, ಆನ್‌ಲೈನ್‌ನಲ್ಲಿ ತರಗತಿಗಳು ನಡೆಯುತ್ತಿರುವುದರಿಂದ ಹದಿಹರೆಯದವರಿಗೆ ಲಸಿಕೆ ನೀಡುವ ವೇಗವು ಕಳೆದ ಕೆಲವು ದಿನಗಳಿಂದ ನಿಧಾನವಾಗಿದೆ ಎಂದು ವಿಷಾದಿಸಿದ ಅವರು, “ನಾವು ಈಗ ಒಂದು ವಾರದ ಗಡುವನ್ನು ನಿಗದಿಪಡಿಸಿದ್ದೇವೆ. ಆದರೆ ಶಾಲೆಗಳು ಪುನರಾರಂಭಗೊಳ್ಳುವುದರೊಂದಿಗೆ, ನಾವು ಮೂರ್ನಾಲ್ಕು ದಿನಗಳಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು ಎಂಬ ವಿಶ್ವಾಸ ನಮಗಿದೆ. ನಾವು ಲಸಿಕಾ ಚಾಲನೆಯನ್ನು ತ್ವರಿತವಾಗಿ ಮತ್ತು ಗಂಭೀರವಾಗಿ ನಡೆಸುತ್ತೇವೆ. ಶಾಲಾ-ಕಾಲೇಜುಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದರು.

ಅಂತೆಯೇ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲು ಉತ್ಸುಕರಾಗಿದ್ದಾರೆ. ಏತನ್ಮಧ್ಯೆ, ರಾಜ್ಯದ ಇತರ ಭಾಗಗಳಲ್ಲಿ ಹದಿಹರೆಯದವರಿಗೆ ಲಸಿಕೆ ನೀಡಿಕೆಯ ವೇಗವು ನಿಧಾನಗೊಂಡಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. “ಇದಕ್ಕೆ ಕಾರಣ ಅನೇಕರು ಲಸಿಕೆ ತೆಗೆದುಕೊಳ್ಳಲು ಮುಂದೆ ಬರುತ್ತಿಲ್ಲ. ಆದರೆ ಈಗ, ಎಲ್ಲಾ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ನಿರ್ಧರಿಸಿರುವುದರಿಂದ ಮತ್ತು ಪರೀಕ್ಷಾ ಋತುವಿನ ಪ್ರಾರಂಭದೊಂದಿಗೆ, ಶಾಲೆಗಳಲ್ಲಿ ಲಸಿಕೆ ಹಾಕಲು ಸಮಯವನ್ನು ಬಳಸಿಕೊಳ್ಳುವ ವಿಶ್ವಾಸವಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
 



Read more

[wpas_products keywords=”deal of the day”]