Karnataka news paper

Karnataka Covid-19 Update: 19 ಜಿಲ್ಲೆಗಳಲ್ಲಿ ಪ್ರಕರಣ ಪತ್ತೆ


ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 19 ಜಿಲ್ಲೆಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 263 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. 

ಒಂದು ದಿನದ ಅವಧಿಯಲ್ಲಿ 71 ಸಾವಿರ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.36ರಷ್ಟಿದೆ. ಐದು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 13 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬಳ್ಳಾರಿ ಸೇರಿದಂತೆ 11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. 

ಬೆಂಗಳೂರು ನಗರದಲ್ಲಿ 158 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ‌ಮೈಸೂರಿನಲ್ಲಿ 16, ಕೊಡಗಿನಲ್ಲಿ 14, ದಕ್ಷಿಣ ಕನ್ನಡದಲ್ಲಿ 13, ಚಿಕ್ಕಮಗಳೂರಿನಲ್ಲಿ 11 ಹಾಗೂ ಬೆಳಗಾವಿಯಲ್ಲಿ 10 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 10ಕ್ಕಿಂತ ಕಡಿಮೆ ಇವೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. 

ಸೋಂಕಿತರಲ್ಲಿ 327 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಸಂಖ್ಯೆ 29.55 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,165ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 5,506 ಸೋಂಕಿತರಿದ್ದಾರೆ. ಯಾದಗಿರಿ, ಗದಗ ಹಾಗೂ ಬೀದರ್‌ನಲ್ಲಿ ಸಕ್ರಿಯ ಪ್ರಕರಣಗಳಿಲ್ಲ. ಹಾವೇರಿ, ಬಾಗಲಕೋಟೆ ಸೇರಿದಂತೆ 7 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ. 

ಕೋವಿಡ್ ಪೀಡಿತರಲ್ಲಿ ಚಿಕ್ಕಮಗಳೂರಿನಲ್ಲಿ ಇಬ್ಬರು, ಬೆಳಗಾವಿ, ಬೆಂಗಳೂರು ನಗರ, ಬೀದರ್, ತುಮಕೂರು ಹಾಗೂ ಉತ್ತರ ಕನ್ನಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 2.66 ರಷ್ಟು ಇದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,275ಕ್ಕೆ ಏರಿಕೆಯಾಗಿದೆ. 



Read more from source