‘ನಾನು ನನ್ನ ಹುಟ್ಟೂರಿನಲ್ಲಿ ಈ ಹಿಂದೆ ಪಾಲಿಕೆ ಸದಸ್ಯನಾಗಿದ್ದೆ. ಚುನಾವಣೆಯಲ್ಲಿ ನನ್ನ ಲೀಡ್ ಕಡಿಮೆಯಾಗಲು ಒಂದೇ ಊರಿನ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿದ್ದು ಕಾರಣ. ಮುಂದಿನ ಚುನಾವಣೆಯಲ್ಲಿ ಅತಿ ಹೆಚ್ಚು ಲೀಡ್ ಪಡೆಯುತ್ತೇನೆ. ನಾನು ನಿಮ್ಮ ರೀತಿ ದಿಢೀರ್ ಅಂತ ಬಂದು ಪದವಿ ಪಡೆದವನಲ್ಲ. 25 ವರ್ಷದಿಂದ ಜನಪ್ರತಿನಿಧಿಯಾಗಿದ್ದೇನೆ’ ಎಂದರು. ‘ಸಂಸದ ಚುನಾವಣೆಯಲ್ಲಿ ನನ್ನ ಮುಖ, ನಾನು ಮಾಡಿದ ಅಭಿವೃದ್ಧಿ ನೋಡಿ ನಿಮಗೆ ಜನರು ಲೀಡ್ ಕೊಟ್ಟಿದ್ದಾರೆ. ಪಾಲಿಕೆ ಚುನಾವಣೆಯಲ್ಲಿ ನನ್ನ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಸೋಲಲು ನೀವೇ ಕಾರಣ. ನೀವೆ ಅವರ ಜವಾಬ್ದಾರಿ ಪಡೆದು ಟಿಕೆಟ್ ನೀಡಿದ್ದೀರಿ. ಅದರಲ್ಲಿ ಎಷ್ಟು ಜನರನ್ನು ಗೆಲ್ಲಿಸಿದ್ದೀರಿ? ವಿಧಾನ ಪರಿಷತ್ ಚುನಾವಣೆ ಉಸ್ತುವಾರಿ ವಹಿಸಿದ್ದ ನೀವು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ್ದೀರಾ? ನಾನು ನಿಮ್ಮಷ್ಟು ವಿದ್ಯಾವಂತ, ಬುದ್ಧಿವಂತ ಅಲ್ಲ. ಬೀದಿಯಲ್ಲಿ ನಿಂತು ನಮಗೆ ಪಾಠ ಮಾಡಬೇಡಿ’ ಎಂದು ಕಿಡಿಕಾರಿದರು.
ಮಹಾರಾಜರನ್ನ ಬಿಟ್ಟರೆ ಅತಿ ಹೆಚ್ಚು ಮತಗಳಿಂದ ಗೆದ್ದಿದ್ದು ನಾನೇ; ಪ್ರತಾಪ್ ಸಿಂಹ
ಶನಿವಾರ ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ ಶಾಸಕರ ವಿರುದ್ಧ ಕಿಡಿಕಾರಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿ ‘ಮಹಾರಾಜರನ್ನ ಬಿಟ್ಟರೆ ಅತಿ ಹೆಚ್ಚು ಮತಗಳಿಂದ ಗೆದ್ದಿದ್ದು ನಾನೇ. ಹೆಚ್ಚು ಲೀಡ್‌ನಲ್ಲಿ ಜನರು ನನ್ನನ್ನು ಮರು ಆಯ್ಕೆ ಮಾಡಿದ್ದಾರೆ. ನನ್ನಿಂದಲೇ ಮೈಸೂರು ಅಭಿವೃದ್ಧಿ ಆಗ್ತಿರೋದು ಅಂತ ಹೇಳುವುದರ ಮೂಲಕ ಶಾಸಕದ್ವಯರ ವಿರುದ್ಧ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
‘ಶಾಸಕ ನಾಗೇಂದ್ರ ಅಭಿವೃದ್ಧಿಯ ಹರಿಕಾರ ಎನ್ನುವ ಭ್ರಮೆಯಲ್ಲಿದ್ದಾರೆ ಎಂದಿದ್ದ ಪ್ರತಾಪ್ ಸಿಂಹ, 30 ಕೋಟಿ ರೂ. ಅನುದಾನ ತಂದಿಲ್ಲ. 300 ಕೋಟಿ ರೂಪಾಯಿ ಕೆಲಸ ಅಂತ ಹೇಳ್ತಾರೆ. ಎಲ್ಲಿದೆ 300 ಕೋಟಿ? ಯಾವ ರಸ್ತೆ ಮಾಡಿದ್ದೀರಿ ಅಂತ ತೋರಿಸಿ. ಚಾಮರಾಜ ಕ್ಷೇತ್ರದ ಕೆ.ಆರ್. ಆಸ್ಪತ್ರೆಯಲ್ಲಿ ಸೊಳ್ಳೆ, ನಾಯಿ ಕಾಟ ಇದೆ. ನಿಮ್ಮ ಕ್ಷೇತ್ರದ ವಿಜಯನಗರದಲ್ಲಿ ವಾಟರ್ ಟ್ಯಾಂಕ್ ಹಾಕಿಸಿದ್ದು ನಾನು. ಪಾಸ್ ಪೋರ್ಟ್ ಸೇವಾ ಕೇಂದ್ರ ಮಾಡಿಸಿದ್ದು ನಾನು. ನೀವು ಗೋವಾಕ್ಕೆ ಹೋಗುವ ಫ್ಲೈಟ್ ತಂದಿದ್ದು ನಾನು. ಬೆಂಗಳೂರು-ಮೈಸೂರು ಹೆದ್ದಾರಿ ಮಾಡಿಸಿದ್ದು ನಾನು. ಕೆ.ಆರ್. ಕ್ಷೇತ್ರದ ಕಸದ ಸಮಸ್ಯೆ ನಿವಾರಿಸಿದ್ದು ನಾನು. ಶಾಸಕರು ರಿಯಲ್ ಎಸ್ಟೇಟ್ ಮಾಡಲಿ, ಆದರೆ ಕೃಷ್ಣರಾಜ, ಚಾಮರಾಜ ಕ್ಷೇತ್ರಗಳು ಅವರ ಬಡಾವಣೆಗಳಲ್ಲ ಎಂದು ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದರು.
Read more
[wpas_products keywords=”deal of the day sale today offer all”]