Karnataka news paper

ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಸ್ವತಂತ್ರವಾಗಿ ಸ್ಪರ್ಧೆ ಎಂದ ಕೆ. ಅಣ್ಣಾಮಲೈ


The New Indian Express

ಚೆನ್ನೈ: ತಮಿಳುನಾಡಿನ ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ತಮಿಳುನಾಡಿನಾದ್ಯಂತ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದೆ. ಆದಾಗ್ಯೂ, 2024ರ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಎನ್ ಡಿಎ ಮೈತ್ರಿಕೂಟದಲ್ಲಿ ಮುಂದುವರೆಯಲಿದೆ ಎಂದು ಸ್ಪಷ್ಪಪಡಿಸಿದರು. 

ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರಿಂದ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಣ್ಣಾಮಲೈ ಹೇಳಿದರು. ಸದ್ಯದಲ್ಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಇದು ಕಷ್ಟಕರವಾದ ನಿರ್ಧಾರವಲ್ಲ, ಎಐಎಡಿಎಂಕೆ ಮುಖಂಡರೊಂದಿಗೆ ಯಾವುದೇ ಸಮಸ್ಯೆಯಿಲ್ಲ, ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಿರ್ಧಾರವನ್ನು ರಾಷ್ಟ್ರೀಯ ವರಿಷ್ಠರ ಅನುಮೋದನೆ ದೊರೆತಿದೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ  ಕಷ್ಟ ಎಂದು ಅಣ್ಣಾಮಲೈ ಹೇಳಿದರು.

ಚೆನ್ನೈ ಸೇರಿದಂತೆ 21 ಮಹಾನಗರ ಪಾಲಿಕೆ, 138 ನಗರಸಭೆ ಹಾಗೂ 490 ಪಟ್ಟಣ ಪಂಚಾಯಿತಿಗಳಿಗೆ ಫೆಬ್ರವರಿ 19 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.



Read more

[wpas_products keywords=”deal of the day”]