Karnataka news paper

ಕೆಪಿಸಿಸಿಯಲ್ಲಿ ಮೂರು ಗುಂಪುಗಳಿವೆ: ಸಚಿವ ಗೋವಿಂದ ಕಾರಜೋಳ


The New Indian Express

ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆಗಳು ನಡೆಯುತ್ತಿವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಭಾನುವಾರ ಹೇಳಿದ್ದಾರೆ. 

ಅಗಸರಕೊಪ್ಪ ಗ್ರಾಮದಲ್ಲಿ ಹೆರ್ಕಲ್‌ (ದಕ್ಷಿಣ) ಏತ ನೀರಾವರಿ ಯೋಜನೆಯ ಉಪಕಾಲುವೆಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಮೂರು ಗುಂಪುಗಳಿದ್ದು,  ಒಂದು ಗುಂಪು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇನ್ನೊಂದು ಗುಂಪು ಕೆಪಿಸಿಸಿ ಅಧ್ಯಕ್ಷರ ಪರವಾಗಿ ಕೆಲಸ ಮಾಡುತ್ತಿದೆ. ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಮೂರನೇ ಗುಂಪಿನಲ್ಲಿ ಜಿ.ಪರಮೇಶ್ವರ, ಶಾಮನೂರು ಶಿವಶಂಕರಪ್ಪ ಅವರಂತಹ ನಾಯಕರಿದ್ದಾರೆಂದು ಹೇಳಿದ್ದಾರೆ. 

ಇದನ್ನೂ ಓದಿ: ಕೈ ನಾಯಕರ ಪಿಸುಮಾತು: ಟಿಕೆಟ್ ಲಾಭಿ ಬಹಿರಂಗ, ಕಾಂಗ್ರೆಸ್ ಗೆ ಮತ್ತೆ ಮುಜುಗರ

ಸಿದ್ದರಾಮಯ್ಯ ಹಾಗೂ ಶಿವಕುಮಾರ್ ನಡುವಿನ ಸಂಬಂಧ ನೀರು ಹಾಗೂ ಎಣ್ಣೆ ಇದ್ದಂತೆ. ಎಂದಿಗೂ ಇಬ್ಬರೂ ಒಂದಾಗುವುದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ದೋಣಿಯಾಗುತ್ತಿದೆ. ಕಳೆದ ಕೆಲ ವರ್ಷಗಳಿಂದಲೂ 27 ಸೀಟುಗಳನ್ನು ಕಳೆದುಕೊಂಡಿದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್’ಗೆ ಸೇರ್ಪಡೆಗೊಳ್ಳುತ್ತಿದ್ದಾರೆಂಬ ಸುದ್ದಿಗಳಿಗೆ ಪ್ರತಿಕ್ರಿಯೆ ನೀಡಿ, ವಿರೋಧ ಪಕ್ಷ ಅತ್ಯಂತ ದುರ್ಬಲವಾಗಿದೆ. ಬಿಜೆಪಿಯ ಯಾವೊಬ್ಬ ನಾಯಕನೂ ಆ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಿಲ್ಲ. 2023 ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆಂದು ಹೇಳಿದ್ದಾರೆ. 

ಇದನ್ನೂ ಓದಿ: ಜಾರಕಿಹೊಳಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ: ಗೋವಿಂದ ಕಾರಜೋಳ

ಬಳಿಕ ಬಿಜೆಪಿ ಆಡಳಿತದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದ ನಂತರ, ಪ್ರವಾಹದಂತಹ ನೈಸರ್ಗಿಕ ವಿಕೋಪಗಳನ್ನು ಎದುರಿಸಿದೆವು. ನಂತರ ಕೋವಿಡ್ -19 ಸಾಂಕ್ರಾಮಿಕ ರೋಗವು ಆಡಳಿತದ ಮೇಲೆ ಪರಿಣಾಮ ಬೀರಿತು. 2013ರಿಂದ 2018ರ ಅವಧಿಯಲ್ಲಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಯಾವುದೇ ಪ್ರವಾಹಗಳೂ ಎದುರಾಗಿರಲಿಲ್ಲ. ಹೀಗಿದ್ದರೂ ಜನರೇಕೆ 2018ರಲ್ಲಿ ಕಾಂಗ್ರೆಸ್’ನ್ನು ಆಯ್ಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.



Read more

[wpas_products keywords=”deal of the day”]