Karnataka news paper

ಕೋವಿಡ್-19: 2ನೇ ಡೋಸ್ ಲಸಿಕೆ ನೀಡಿಕೆಯಲ್ಲಿ ಶೇ.100 ರಷ್ಟು ಸಾಧನೆ ಮಾಡಿದ ಮೊದಲ ಜಿಲ್ಲೆ ಬೆಂಗಳೂರು ಗ್ರಾಮಾಂತರ


Online Desk

ಬೆಂಗಳೂರು: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಪರಿಣಾಮಕಾರಿಯಾಗಿ ಲಸಿಕೆ ನೀಡುವಿಕೆಯಲ್ಲಿ ಬೆಂಗಳೂರು ಗ್ರಾಮಾತರ ಜಿಲ್ಲೆ ಉತ್ತಮ ಸಾಧನೆ ಮಾಡಿದೆ.  ಎರಡನೇ ಡೋಸ್ ಲಸಿಕೆ ನೀಡುವಿಕೆಯಲ್ಲಿ ಶೇ. 100 ರಷ್ಟು ಗುರಿ ಸಾಧಿಸಿದ ಮೊದಲ ಜಿಲ್ಲೆಯಾಗಿ ಹೊರಹೊಮ್ಮಿದೆ. 

ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್,  ಎರಡನೇ ಡೋಸ್ ಲಸಿಕೆ ನೀಡುವಿಕೆಯಲ್ಲಿ ರಾಜ್ಯದ 11 ಜಿಲ್ಲೆಗಳು ಶೇಕಡಾ 90 ರಷ್ಟು ಸಾಧನೆ ಮಾಡಿವೆ. ಈ ಸಾಧನೆಯಲ್ಲಿ ತೊಡಗಿಸಿಕೊಂಡ ಎಲ್ಲಾ ಆರೋಗ್ಯ ಕಾರ್ಯಕರ್ತರು ಹಾಗೂ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 81900 ವಯಸ್ಕರಿಗೆ ಲಸಿಕೆ ನೀಡಲಾಗಿದ್ದು, 818654 ಜನರಿಗೆ ಎರಡನೇ ಡೋಸ್ ನೀಡುವುದರೊಂದಿಗೆ ಶೇಕಡಾ 100 ರಷ್ಟು ಸಾಧನೆ ಮಾಡಲಾಗಿದೆ. ವಿಜಯಪುರ ಶೇ. 99, ಕೊಡಗು ಶೇ. 97, ಗದಗ ಶೇ. 95, ಮಂಡ್ಯ ಶೇ.93  ರಷ್ಟು ಸಾಧನೆಯೊಂದಿಗೆ ಕ್ರಮವಾಗಿ ಎರಡು, ಮೂರು, ನಾಲ್ಕು ಹಾಗೂ ಐದನೇ ಸ್ಥಾನ ಪಡೆದುಕೊಂಡಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.





Read more

[wpas_products keywords=”deal of the day”]