Karnataka news paper

Budget 2022: ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆಗೆ ಒತ್ತು ನೀಡಿದ ನಿರ್ಮಲಾ ಸೀತಾರಾಮನ್!


ಹೊಸದಿಲ್ಲಿ: ಕೇಂದ್ರ ಬಜೆಟ್ 2022 ಮಂಡನೆಗೆ ಅಧಿಕೃತ ಚಾಲನೆ ದೊರೆತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿದ್ದಾರೆ.

ರಕ್ಷಣಾ ವಲಯಕ್ಕೆ ಕೇಂದ್ರ ಸರ್ಕಾರ ನೀಡುತ್ತಿರುವ ಮಹತ್ವವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್, ಆತ್ಮನಿರ್ಭರ ಭಾರತ ಯೋಜನೆಯಡಿಯಲ್ಲಿ ರಕ್ಷಣಾ ವಲಯದ ಸ್ವಾವಲಂಬನೆಗೆ ಮುಂದಡಿ ಇಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆಯನ್ನು ತ್ತೇಜಿಸಲು ಮತ್ತು ರಕ್ಷಣಾ ಉಪಕರಣಗಳ ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ದೇಶೀಯ ಉದ್ಯಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಬಂಡವಾಳ ಸಂಗ್ರಹಣೆಗಾಗಿ ಬಜೆಟ್‌ನ ಶೇ.68 ರಷ್ಟು ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಕಳೆದ ಆರ್ಥಿಕ ವರ್ಷದಲ್ಲಿ ರಕ್ಷಣಾ ವಲಯದಲ್ಲಿ ಬಂಡವಾಳ ಸಂಗ್ರಹಣೆಗಾಗಿ ಶೇ.58ರಷ್ಟು ಅನುದಾನ ಮೀಸಲಿಡಲಾಗಿತ್ತು. ಈ ಬಾರಿ ಶೇ.10ರಷ್ಟು ಅನುದಾನ ಹೆಚ್ಚಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು. ಆತ್ಮನಿರ್ಭರ ಭಾರತ ಯೋಜನೆಯಡಿಯಲ್ಲಿ ದೇಶೀಯವಾಗಿ ರಕ್ಷಣಾ ಉಪಕರಣಗಳ ಉತ್ಪಾದನೆಗೆ ಒತ್ತು ನೀಡಲಾಗುವುದು. ಇದಕ್ಕಾಗಿ ದೇಶೀಯ ಉದ್ಯಮ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ರಕ್ಷಣಾ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದ್ದು, ಇದನ್ನು ಹಂತ ಹಂತವಾಗಿ ಸಾಧಿಸಲಾಗುವುದು. ರಕ್ಷಣಾ ಉಪಕರಣಗಳ ಆಮದು ಕಡಿಮೆ ಮಾಡಲು ದೇಶೀಯ ಉತ್ಪಾದನೆಯನ್ನು ಹಂತ ಹಂತವಾಗಿ ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ನುಡಿದರು.

Budget 2022: ‘ಅಮೃತ ಕಾಲ’ಕ್ಕೆ ಆರ್ಥಿಕ ನೀಲನಕ್ಷೆ ನೀಡುವ ಬಜೆಟ್ ಎಂದ ವಿತ್ತ ಸಚಿವೆ!
ದೇಶದ ಗಡಿಗಳ ಸುರಕ್ಷತೆ ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದ್ದು, ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ ಸಾಧಿಸುವ ಮೂಲಕ ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು. ಮೂರೂ ರಕ್ಷಣಾ ಪಡೆಗಳ ಆಧುನೀಕರಣದಲ್ಲಿ ನಮ್ಮ ಸರ್ಕಾರ ಎಳ್ಳಷ್ಟೂ ಉದಾಸೀನತೆ ತೋರುವುದಿಲ್ಲ ಎಂದು ವಿತ್ತ ಸಚಿವೆ ದೇಶಕ್ಕೆ ಭರವಸೆ ನೀಡಿದರು.



Read more

[wpas_products keywords=”deal of the day sale today offer all”]