Karnataka news paper

ವಿದೇಶಕ್ಕೆ ತೆರಳಲು ನಿರ್ಬಂಧ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಬಿಟ್‌ಕಾಯಿನ್‌ ಆರೋಪಿ ಹ್ಯಾಕರ್ ಶ್ರೀಕೃಷ್ಣ


| Vijaya Karnataka | Updated: Feb 2, 2022, 7:09 AM

ಬಿಟ್‌ಕಾಯಿನ್ ಹಗರಣದ ಪ್ರಮುಖ ರೂವಾರಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಭಟ್‌ಗೆ ಅನುಮತಿ ನೀಡುವಂತೆ ಕೋರಿ ಆತನ ಸಹೋದರ ಸುದರ್ಶನ್‌ ರಮೇಶ್‌ ಸಲ್ಲಿಸಿರುವ ಅರ್ಜಿಯ ಕುರಿತು ನ್ಯಾ. ಕೃಷ್ಣ ದೀಕ್ಷಿತ್‌ ಅವರಿದ್ದ ಏಕ ಸದಸ್ಯ ಪೀಠವು ವಿಚಾರಣೆ ನಡೆಸಿತು. ಕೇಂದ್ರ ಸರಕಾರ, ಜಾರಿ ನಿರ್ದೇಶನಾಲಯ ಮತ್ತು ಬ್ಯುರೊ ಆಫ್‌ ಇಮಿಗ್ರೇಷನ್‌ಗೆ ನೋಟಿಸ್‌ ಜಾರಿ ಮಾಡಿ, ಉತ್ತರ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಫೆ.3ಕ್ಕೆ ಮುಂದೂಡಿತು.

 

Hacker Shreeki

ಹೈಲೈಟ್ಸ್‌:

  • ವಿದೇಶಕ್ಕೆ ತೆರಳಲು ನಿರ್ಬಂಧ ಪ್ರಶ್ನಿಸಿ ಕೋರ್ಟ್‌ಗೆ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಭಟ್
  • ಹ್ಯಾಕರ್ ಶ್ರೀಕಿಗೆ ವಿದೇಶಕ್ಕೆ ತೆರಳಲು ನಿರ್ಬಂಧ ವಿಧಿಸಿರುವ ಜಾರಿನಿರ್ದೇಶನಾಲಯ
  • ನಿರ್ಬಂಧ ಪ್ರಶ್ನಿಸಿದ ಅರ್ಜಿಯ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್‌ನಿಂದ ನೋಟಿಸ್‌ ಜಾರಿ
ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದ ರೂವಾರಿ ಎನ್ನಲಾದ ಶ್ರೀಕಿ ಅಲಿಯಾಸ್‌ ಶ್ರೀಕೃಷ್ಣ ಭಟ್‌ಗೆ ವಿದೇಶಕ್ಕೆ ತೆರಳಲು ಜಾರಿ ನಿರ್ದೇಶನಾಲಯ ವಿಧಿಸಿರುವ ನಿರ್ಬಂಧ ಪ್ರಶ್ನಿಸಿದ ಅರ್ಜಿಯ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಉದ್ಯೋಗದ ನಿಮಿತ್ತ ನೆದರ್‌ಲ್ಯಾಂಡ್‌ಗೆ ಪ್ರವಾಸ ಕೈಗೊಳ್ಳಲು ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಭಟ್‌ಗೆ ಅನುಮತಿ ನೀಡುವಂತೆ ಕೋರಿ ಆತನ ಸಹೋದರ ಸುದರ್ಶನ್‌ ರಮೇಶ್‌ ಸಲ್ಲಿಸಿರುವ ಅರ್ಜಿಯ ಕುರಿತು ನ್ಯಾ. ಕೃಷ್ಣ ದೀಕ್ಷಿತ್‌ ಅವರಿದ್ದ ಏಕ ಸದಸ್ಯ ಪೀಠವು ವಿಚಾರಣೆ ನಡೆಸಿತು. ಕೇಂದ್ರ ಸರಕಾರ, ಜಾರಿ ನಿರ್ದೇಶನಾಲಯ ಮತ್ತು ಬ್ಯುರೊ ಆಫ್‌ ಇಮಿಗ್ರೇಷನ್‌ಗೆ ನೋಟಿಸ್‌ ಜಾರಿ ಮಾಡಿ, ಉತ್ತರ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಫೆ.3ಕ್ಕೆ ಮುಂದೂಡಿತು.
ಬಿಟ್‌ಕಾಯಿನ್‌ ಹಗರಣದ ಆರೋಪಿ ಶ್ರೀಕಿ ಮತ್ತೆ ಬಂಧನ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ಕಾರಣ!
ಅರ್ಜಿದಾರರ ಪರ ವಕೀಲರು ‘ಶ್ರೀಕಿಯು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿ ಬಿಟ್‌ ಕಾಯಿನ್‌ ಹಗರಣದ ಅವಧಿಯಲ್ಲಿ ಭಾರತದಲ್ಲಿ ಇರಲೇ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾನೆ. ಸದ್ಯ ಅರ್ಜಿದಾರರ ತಂದೆ ಅನಾರೋಗ್ಯದಿಂದ ಕೋಮಾ ಸ್ಥಿತಿಯಲ್ಲಿದ್ದಾರೆ. ಅವರ ಚಿಕಿತ್ಸೆ ಗೆ ಹಣದ ಅವಶ್ಯಕತೆ ಇದೆ. ಉದ್ಯೋಗಕ್ಕಾಗಿ ನೆದರ್‌ಲ್ಯಾಂಡ್‌ಗೆ ತೆರಳುವ ವೇಳೆ ಜ.13ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ತೆರಳುತ್ತಿರುವಾಗ ಇಮಿಗ್ರೇಷನ್‌ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರವಾಸಕ್ಕೆ ಅಡ್ಡಿಪಡಿಸಿದ್ದಾರೆ. ಪಾಸ್‌ಪೋರ್ಟ್‌ ಅನ್ನು ನಿರ್ಬಂಧಿಸಿದ್ದಾರೆ. ಅಧಿಕಾರಿಗಳ ಆದೇಶ ರದ್ದುಪಡಿಸ ಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
Bitcoin Scam:’ಬಿಟ್’ರೂ ಬಿಡದ ಹಗರಣ; ಬಿಟ್‌ ಕಾಯಿನ್‌ ಪ್ರಕರಣದ ಸಂಪೂರ್ಣ ಟೈಮ್‌ಲೈನ್‌..!
ಏನಿದು ಪ್ರಕರಣ?
ಶ್ರೀಕೃಷ್ಣ ಭಟ್‌ ಅಲಿಯಾಸ್‌ ಶ್ರೀಕಿ ಸರಕಾರಿ ವೆಬ್‌ಸೈಟ್‌ ಹ್ಯಾಕ್‌ ಮಾಡಿ ಕೋಟ್ಯಂತರ ರೂ. ವಂಚನೆ ಮಾಡಿ ಆ ಹಣದಲ್ಲಿ ಬಿಟ್‌ ಕಾಯಿನ್‌ ಖರೀದಿಸಿದ್ದ. ಈ ಬಿಟ್‌ಕಾಯಿನ್‌ ಬಳಸಿ ವಿದೇಶಗಳಿಂದ ಡ್ರಗ್ಸ್‌ ತರಿಸುತ್ತಿದ್ದ. ಈ ಮಾಹಿತಿ ಮೇರೆಗೆ ಎರಡು ವರ್ಷಗಳ ಹಿಂದೆ ಶ್ರೀಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇತ್ತೀಚೆಗೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ಕಾಯಿನ್‌ ವ್ಯವಹಾರದಲ್ಲಿ ರಾಜಕೀಯ ಮುಖಂಡರು ಮತ್ತು ಕೆಲವು ಸರಕಾರಿ ಅಧಿಕಾರಿಗಳು ಮತ್ತು ನಿವೃತ್ತ ಪೊಲೀಸ್‌ ಅಧಿಕಾರಿಗಳ ಹೆಸರು ಕೇಳಿ ಬಂದಿದೆ.

ಈ ಪ್ರಕರಣದಲ್ಲಿ ನಾಲ್ವರು ಪ್ರಮುಖ ರಾಜಕಾರಣಿಗಳು ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಪ್ರತಿಪಕ್ಷ ಕಾಂಗ್ರೆಸ್‌ ನಾಯಕರು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಟ್‌ ಕಾಯಿನ್‌ ಪ್ರಕರಣವನ್ನು ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಕಳೆದ ನವೆಂಬರ್ ತಿಂಗಳಲ್ಲಿ ಹೇಳಿದ್ದರು. ಬಳಿಕ ಈ ಪ್ರಕರಣ ತಣ್ಣಗಾಗಿದೆ.

ಸಮೀಪದ ನಗರಗಳ ಸುದ್ದಿ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ

Web Title : hacker shreeki has questioned the high court on the issue of sanctions by the directorate of enforcement not go to abroad
Kannada News from Vijaya Karnataka, TIL Network



Read more

[wpas_products keywords=”deal of the day sale today offer all”]