The New Indian Express
ಬೆಳಗಾವಿ: ಬೆಳಗಾವಿ ತಾಲೂಕಿನ ಕೊಂಡುಸ್ಕೊಪ್ಪ ಗ್ರಾಮದ ಹೊರವಲಯದ ಹನುಮಂತವಾರಿ ಮಾಳದಲ್ಲಿ ಭಾನುವಾರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದ ಮಾರುತಿ ಪಿರಾಜಿ ಬೆಳಗಾಂವಕರ ಅವರು ತಲೆಬುರುಡೆ ಮತ್ತು ಕೆಲವು ಮೂಳೆಗಳಿರುವ ಅಸ್ಥಿಪಂಜರವನ್ನು ಮೊದಲು ಪತ್ತೆ ಹಚ್ಚಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಉಪ ಪೊಲೀಸ್ ಆಯುಕ್ತ ರವೀಂದ್ರ ಗಡಾಡಿ ನೇತೃತ್ವದ ಪೊಲೀಸ್ ತಂಡ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಸ್ಥಿಪಂಜರದ ಅವಶೇಷಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆದರೆ, ಇದು ಪುರುಷನದ್ದೋ ಅಥವಾ ಮಹಿಳೆಯ ಅಸ್ಥಿ ಪಂಜರವೋ ಎಂಬುದು ತಿಳಿದು ಬಂದಿಲ್ಲ.
ಘಟನಾ ಸ್ಥಳದಲ್ಲಿ ಪೊಲೀಸರಿಗೆ ಚರ್ಮದ ಬೆಲ್ಟ್ ಮತ್ತು ಜೀನ್ಸ್ ಪ್ಯಾಂಟ್ ಸಿಕ್ಕಿದೆ. ಹಾಗಾಗಿ ಅಸ್ಥಿಪಂಜರ ಪುರುಷನದ್ದು ಎಂದು ಪೊಲೀಸರು ಶಂಕಿಸಿದ್ದಾರೆ . ಆರು ತಿಂಗಳ ಹಿಂದೆಯೇ ವ್ಯಕ್ತಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಶವಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಿದ್ದಾರೆ.
ಬೆಳಗಾವಿ ಮತ್ತು ಸುತ್ತಮುತ್ತಲಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವ್ಯಕ್ತಿ ಕಾಣೆಯಾದ ದೂರುಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read more
[wpas_products keywords=”deal of the day”]