ಮುಂಬೈ: ಚಿತ್ರ ನಿರ್ದೇಶಕಿ, ನಿರ್ಮಾಪಕಿ ಐಶ್ವರ್ಯಾ ರಜನಿಕಾಂತ್ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಹಿರಿಯ ಮಗಳು ಐಶ್ವರ್ಯಾ, ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೊ ಸಮೇತ ಪೋಸ್ಟ್ ಮಾಡಿರುವ ಅವರು, ‘ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿದ ಬಳಿಕವೂ ನನಗೆ ಕೋವಿಡ್ ದೃಢಪಟ್ಟಿದೆ. ದಯವಿಟ್ಟು ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಲಸಿಕೆ ಹಾಕಿಸಿಕೊಂಡು ಸುರಕ್ಷಿತವಾಗಿರಿ’ ಎಂದು ಬರೆದುಕೊಂಡಿದ್ದಾರೆ.
ಕಳೆದ ತಿಂಗಳು ನಟ ಧನುಷ್ ಹಾಗೂ ಐಶ್ವರ್ಯಾ ದಂಪತಿ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದರು.
ಐಶ್ವರ್ಯಾ ಅವರನ್ನು ಧನುಷ್ ಅವರು 2004ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.
ಓದಿ… 18 ವರ್ಷಗಳ ವೈವಾಹಿಕ ಜೀವನ ಮುರಿದ ಧನುಷ್-ಐಶ್ವರ್ಯಾ ರಜನಿಕಾಂತ್ ಜೋಡಿ
Read More…Source link
[wpas_products keywords=”deal of the day party wear for men wedding shirt”]