ದಿನಾಂಕ 7 ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಭೆ ನಡೆಯಲಿದೆ. ಬಳಿಕ ಕೃಷಿ, ಕಾರ್ಮಿಕ, ಸಹಕಾರ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ, ತೋಟಗಾರಿಕೆ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಜೊತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಲಿದ್ದಾರೆ.
ಮಂಗಳವಾರದಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ, ಪ್ರವಾಸೋದ್ಯಮ, ಸಾರಿಗೆ, ಪರಿಶಿಷ್ಠ ಪಂಗಡಗಳ ಅಭಿವೃದ್ದಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಆಡಳಿತ ಸುಧಾರಣೆ ಇಲಾಖೆಗಳ ಜೊತೆ ಸಭೆ ನಡೆಯಲಿದೆ.
ಬುಧವಾರದಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ, ಗೃಹ, ಜಲ ಸಂಪನ್ಮೂಲ, ಕಂದಾಯ, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲನೆ, ಲೋಕೋಪಯೋಗಿ, ಕೈಮಗ್ಗ ಮತ್ತು ಜವಳಿ, ಸಕ್ಕರೆ ಇಲಾಖೆಯ ಸಭೆ ನಡೆಯಲಿದೆ.
ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ಸಿಎಂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಣ್ಣ ಕೈಗಾರಿಕೆ, ಪೌರಾಡಳಿತ, ನಗರಾಭಿವೃದ್ದಿ ಇಲಾಖೆಗಳ ಜೊತೆ ಸಭೆಯನ್ನು ನಡೆಸಲಿದ್ದಾರೆ.
ಶುಕ್ರವಾರ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಸಕಾಲ, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಸಂಗೋಪನೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ, ಮುಜರಾಯಿ, ಹಜ್ ಮತ್ತು ವಕ್ಫ್, ಅಲ್ಪಸಂಖ್ಯಾತ ಕಲ್ಯಾಣ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಇಲಾಖೆಗಳ ಜೊತೆ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.
ಫೆಬ್ರವರಿ 14 ರಂದು ಸೋಮವಾರ ವಸತಿ, ಮೂಲ ಸೌಕರ್ಯ ಅಭಿವೃದ್ದಿ, ನಗರಾಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಸಭೆ ನಡೆಯಲಿದೆ. ಫೆ. 21 ರಂದು ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ. ಬಳಿಕ ವಿವಿಧ ಸಂಘಟನೆಗಳು ಹಾಗೂ ತೆರಿಗೆ ಸಂಗ್ರಹಣಾ ಇಲಾಖೆಗಳ ಪರಿಶೀಲನಾ ಸಭೆಯನ್ನು ಹಣಕಾಸು ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ನಡೆಸಲಿದ್ದಾರೆ.
Read more
[wpas_products keywords=”deal of the day sale today offer all”]