Karnataka news paper

ಐಪಿಎಸ್ ಅಧಿಕಾರಿ ಭ್ರಷ್ಟಾಚಾರ ಆರೋಪ ಪ್ರಕರಣ: ತನಿಖೆ ನಂತರ ಕ್ರಮ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ


Online Desk

ಮೈಸೂರು: ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದ ಸಂಬಂಧದ ದೂರು ಆಧರಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ ೪೫ನೇ ತಂಡದ ಪಿಎಸ್‌ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಶಿಕ್ಷೆ ನೀಡಿಲ್ಲ ಅದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದರು. ಅಂತೆಯೇ ಯಾರು ಬೇಕಾದರೂ ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಅದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.

ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ ಎಫ್‌ಎಸ್‌ಎಲ್ ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್‌ಎಸ್‌ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ. ಹೆಣ್ಣು ಕೇವಲ ಅಡುಗೆ ಮನೆಗೆ ಸೀಮಿತವಲ್ಲ. ಸಾರ್ವಜನಿಕರ ರಕ್ಷಣೆಗೂ ಸಹ ಆಕೆ ಬದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: 3 ಕೋಟಿ ರೂ. ಪರಿಹಾರ, 2 ವರ್ಷ ಜೈಲು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ- ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್

ರಕ್ಷಣೆ ಅಂದರೆ ಗಡಿಯ ಸೈನಿಕರು. ಆತಂರಿಕ ಭದ್ರತೆ ನಾಗರೀಕರ ಮಾನ ಪ್ರಾಣ ಕಾಪಾಡುವ ಹೊಣೆಗಾರಿಕೆ ಪೊಲೀಸರದ್ದು. ಸೈನಿಕರಷ್ಟೇ ಪೊಲೀಸರು ದಿನದ ೨೪ ಗಂಟೆ ಕೆಲಸ ಮಾಡುತ್ತಿದ್ದಾರೆ. ಸೈನಿಕರಿಗಿಂತ ಪೊಲೀಸರು ವಿಭಿನ್ನ. ಸೈನಿಕರಿಗೆ ಶತೃಗಳು ಕಾಣಿಸುತ್ತಾರೆ. ಕೊಲ್ಲಬೇಕು ಅಥವಾ ಮಡಿಯಬೇಕು. ಆದರೆ ಪೊಲೀಸರು ಕೊಲ್ಲಲು ಇಲ್ಲ ಕಾನೂನು ಇದಕ್ಕೆ ಅಡ್ಡಿಬರುತ್ತದೆ. ಸೈನಿಕರಷ್ಟು ಕಠಿಣವಾಗಿ ವರ್ತಿಸುವ ಹಾಗೆ ಇಲ್ಲ. ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್‌ಗಳಿಗೆ ಭಯ ಹುಟ್ಟಿಸಬೇಕು. ನಾಗರೀಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
 





Read more

[wpas_products keywords=”deal of the day”]