Karnataka news paper

ಬೆಂಗಳೂರಿನಲ್ಲಿ ಕೆಲವೇ ದಿನಗಳಲ್ಲಿ ಟೋಯಿಂಗ್‌ಗೆ ಹೊಸ ವ್ಯವಸ್ಥೆ: ಗೃಹ ಸಚಿವ ಆರಗ ಜ್ಞಾನೇಂದ್ರ


ಬೆಂಗಳೂರು:ಟ್ರಾಫಿಕ್ ಪೊಲೀಸರು ನಡೆಸುವ ಟೋಯಿಂಗ್ ಕಾರ್ಯಾಚರಣೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಕೆಲವೇ ದಿನಗಳಲ್ಲಿ ಹೊಸ ವ್ಯವಸ್ಥೆ ಜಾರಿಗೊಳಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಟೋಯಿಂಗ್ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಎಎಸ್‌ಐ ಹಲ್ಲೆ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಟೋಯಿಂಗ್ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಬುಧವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಕಾಸ ಸೌಧದಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿದರು.

ರಾಜ್ಯ ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಸಂಚಾರಿ ವಿಭಾಗದ ಜಂಟಿ ಆಯುಕ್ತ ರವಿಕಾಂತೇಗೌಡ ಈ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯ ಬಳಿಕ ಮಾತನಾಡಿದ ಗೃಹ ಸಚಿವರು, ಟೋಯಿಂಗ್ ಬಗ್ಗೆ ಸಾರ್ವಜನಿಕರ ಹೇಳಿಕೆಗಳನ್ನು ಗೌರವಿಸಲಾಗುತ್ತಿದೆ. ಅದೇ ಕಾರಣಕ್ಕೆ ಸದ್ಯಕ್ಕೆ ಟೋಯಿಂಗ್ ನಿಲ್ಲಿಸಿದ್ದೇವೆ. ಸಿಎಂ ಕೂಡ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಒಂದು ನಿರ್ಣಯಕ್ಕೆ ಬನ್ನಿ ಅಂತ ಸಿಎಂ ಹೇಳಿದ್ದರು ಎಂದು ತಿಳಿಸಿದರು.

ಬೈಕ್ ಬಿಡಿಸಿಕೊಳ್ಳಲು ಟೋಯಿಂಗ್ ವಾಹನದ ಹಿಂದೆ ಯುವಕನ ಓಟ : ಬೆಂಗಳೂರಿನಲ್ಲಿ ಮನಕಲಕುವ ಘಟನೆ
ಈಗ ಇಲಾಖಾಧಿಕಾರಿಗಳ ಸಭೆ ನಡೆಸಿದ್ದೇನೆ. ಸಭೆ ಮುಗಿಸಿ ಸಿಎಂ ಜೊತೆ ಚರ್ಚಿಸಲು ತೆರಳುತ್ತಿದ್ದೇವೆ. ಕೆಲವೇ ದಿನಗಳಲ್ಲಿ ಹೊಸ ವ್ಯವಸ್ಥೆ ತರುತ್ತೇವೆ. ಸಿಎಂ ಜೊತೆ ಚರ್ಚಿಸಿ ಏನು ಅನ್ನೋದನ್ನು ಘೋಷಿಸಲಾಗುವುದು ಎಂದು ಹೇಳಿದರು.

ಟೋಯಿಂಗ್ ಗಲಾಟೆ : ಸಮಸ್ಯೆ ಪರಿಹಾರಕ್ಕೆ ಮುಂದಾದ ಸರ್ಕಾರ; ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
ಮುಂದೆ ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಆಗಬಾರದು. ಪಾರ್ಕಿಂಗ್ ನಾಮಫಲಕಗಳು ಸಾರ್ವಜನಿಕರಿಗೆ ಸರಿಯಾಗಿ ಕಾಣಬೇಕು. ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದುವರೆಗೂ ಏನಾಗಿದೆಯೋ ಇನ್ನು ಮುಂದೆ ಆಗಬಾರದು. ವ್ಯವಸ್ಥೆಯನ್ನು ಸರಳೀಕರಣಗೊಳಿಸಿ ಪಾರದರ್ಶಕತೆ ತರುತ್ತೇವೆ. ಸಂಚಾರ ಪೊಲೀಸರ ನೂನ್ಯತೆ ಬಗ್ಗೆಯೂ ಗಮನ ಹರಿಸುತ್ತೇವೆ ಎಂದು ಗೃಹ ಸಚಿವರು ತಿಳಿಸಿದರು.

ಬೆಂಗಳೂರು: ಟೋಯಿಂಗ್‌ ತಾತ್ಕಾಲಿಕ ಸ್ಥಗಿತ, ಸಾರ್ವಜನಿಕರಿಗೆ ಸ್ವಲ್ಪ ರಿಲೀಫ್‌



Read more

[wpas_products keywords=”deal of the day sale today offer all”]