Online Desk
ಮೈಸೂರು: ಸಾರ್ವಜನಿಕರು ರಸ್ತೆಬದಿಯಲ್ಲಿ ವಾಹನಗಳನ್ನು ನಿಲ್ಲಿಸುವ ಕ್ರಮದಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು. ಎಲ್ಲಿಯವರೆಗೂ ಸಾರ್ವಜನಿಕರು ಹೊಣೆಗಾರಿಕೆ ಅರಿಯುವುದಿಲ್ಲವೋ ಅಲ್ಲಿಯವರೆಗೂ ಪೊಲೀಸರಿಂದ ಕಾನೂನಾತ್ಮಕ ಕ್ರಮ ಅನಿವಾರ್ಯ. ಜನರು ಅಡ್ಡಾದಿಡ್ಡಿ ವಾಹನ ನಿಲ್ಲಿಸುವುದರಿಂದ ಸಮಸ್ಯೆಯಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮೈಸೂರಿನಲ್ಲಿಂದು ಮಾತನಾಡಿದ ಅವರು, ಖಾಸಗಿಯವರಿಂದ ಟೋಯಿಂಗ್ ವೇಳೆ ಜನರಿಗೆ ಸಮಸ್ಯೆಯಾಗುತ್ತಿದೆ. ಹೆಚ್ಚು ಕಮಿಷನ್ಗಾಗಿ ತೊಂದರೆ ನೀಡಿರುವುದು ಸತ್ಯ. ಹೀಗಾಗಿ ಸದ್ಯಕ್ಕೆ ಟೋಯಿಂಗ್ ನಿಲ್ಲಿಸಲಾಗಿದೆ. ಇಂದು ಈ ಬಗ್ಗೆ ಸಂಜೆ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.
ಪೊಲೀಸ್ ಇಲಾಖೆ ಬೇರೆ ಇಲಾಖೆಗಿಂತ ಭಿನ್ನ. ಪೊಲೀಸ್ ಇಲಾಖೆಗೆ ಬಲಿಷ್ಠ ಯುವಪಡೆ ಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: 3 ಕೋಟಿ ರೂ. ಪರಿಹಾರ, 2 ವರ್ಷ ಜೈಲು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ- ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್
ರವಿ ಚನ್ನಣ್ಣನವರ್ ವಿರುದ್ಧ ದೂರಿನ ತನಿಖೆ ಆರಂಭ: ರವಿ ಚನ್ನಣ್ಣನವರ್ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದಿರುವ ದೂರು ಆಧರಿಸಿ ತನಿಖೆ ಆರಂಭವಾಗಿದೆ. ಯಾರು ಬೇಕಾದರೂ ಯಾರ ಮೇಲೆ ಆರೋಪ ಮಾಡಬಹುದು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ವರ್ಗಾವಣೆ ಶಿಕ್ಷೆಯಲ್ಲ. ರವಿ ಚನ್ನಣ್ಣನವರ್ ಅವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಎಂದರು.
Read more
[wpas_products keywords=”deal of the day”]