Karnataka news paper

ಜಾತಿ ಆಧಾರಿತ ಏಳು ಅಭಿವೃದ್ಧಿ ನಿಗಮಗಳಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಆದೇಶ


ಬೆಂಗಳೂರು: ಜಾತಿ ಆಧಾರಿತ ನಿಗಮ- ಮಂಡಳಿಗಳನ್ನು ರದ್ದುಗೊಳಿಸುವಂತೆ ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹೈಕೋರ್ಟ್‌ನಲ್ಲಿ ಬುಧವಾರ ವಿಚಾರಣೆಗೆ ಬಂತು. ಈ ಸಂಬಂಧ, ಮತ್ತೆ ಏಳು ಜಾತಿ ಆಧಾರಿತ ಅಭಿವೃದ್ಧಿ ನಿಗಮ ಮಂಡಳಿಗಳಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಹಾಗೂ ಜೆ.ಶ್ರೀನಿವಾಸನ್‌ ಸಲ್ಲಿಸಿರುವ ಮಧ್ಯಂತರ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಕಾಡುಗೊಲ್ಲಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿತು.
ಹೈಕೋರ್ಟ್‌ ರಿಜಿಸ್ಟ್ರಾರ್‌ ವಿರುದ್ಧವೇ ನ್ಯಾಯಾಂಗ ನಿಂದನೆ ದಾವೆ ಹೂಡಿದ್ದವಗೆ 11 ಲಕ್ಷ ದಂಡ
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಬ್ರಾಹ್ಮಣ ಅಭಿವೃದ್ಧಿ ನಿಗಮ ಹಾಗೂ ಆರ್ಯವೈಶ್ಯ ನಿಗಮ ಮಂಡಳಿ ಸ್ಥಾಪಿಸಿರುವುದನ್ನು ಪ್ರಶ್ನಿಸಿ ಈಗಾಗಲೇ ಹೈಕೋರ್ಟ್‌ನ ಹಿರಿಯ ವಕೀಲ ಎಸ್‌.ಬಸವರಾಜ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಇದರೊಟ್ಟಿಗೆ ಮಧ್ಯಂತರ ಅರ್ಜಿಯನ್ನೂ ಸಲ್ಲಿಸಲಾಗಿದೆ. ಮಧ್ಯಂತರ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್‌ ವಾದ ಮಂಡಿಸಿ ‘ಎಲ್ಲ ಜಾತಿ ಆಧಾರಿತ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳನ್ನು ರದ್ದುಗೊಳಿಸಬೇಕು’ ಎಂದು ಮನವಿ ಮಾಡಿದರು. ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿದೆ.



Read more

[wpas_products keywords=”deal of the day sale today offer all”]