Karnataka news paper

2024 ರಲ್ಲಿ ಬಿಜೆಪಿಯನ್ನು ಮಣಿಸಲು ಪ್ರಾದೇಶಿಕ ಪಕ್ಷಗಳು ಒಗ್ಗೂಡಬೇಕು: ಮಮತಾ ಬ್ಯಾನರ್ಜಿ


The New Indian Express

ಕೋಲ್ಕತ್ತ: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದಕ್ಕಾಗಿ ಪ್ರಾದೇಶಿಕ ಪಕ್ಷಗಳು ಒಗ್ಗೂಡಬೇಕೆಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. 

ಬ್ಯಾನರ್ಜಿ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ಆ ಪಕ್ಷ ಅಹಂಕಾರದಿಂದ ಹಿಂದೆ ಕೂರಲು ಬಯಸುತ್ತಿದ್ದರೆ ತಮ್ಮ ಪಕ್ಷವನ್ನು ದೂಷಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. 

ಇದನ್ನೂ ಓದಿ: ‘ಡಿಸ್ಟರ್ಬ್ಡ್’ ಪೋಸ್ಟ್: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಖಾತೆ ಬ್ಲಾಕ್ ಮಾಡಿದ ಮಮತಾ ಬ್ಯಾನರ್ಜಿ

2024 ರಲ್ಲಿ ಬಿಜೆಪಿಯನ್ನು ಮಣಿಸುವುದಕ್ಕೆ ಎಲ್ಲಾ ಪ್ರಾದೇಶಿಕ ಪಕ್ಷಗಳೂ ಒಗ್ಗೂಡಬೇಕು. ಬಿಜೆಪಿಯನ್ನು ಮಣಿಸುವುದೇ ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ ಸಿಪಿಐ(ಎಂ) ನ್ನು ಮಣಿಸಬಹುದಾಗಿದ್ದರೆ, ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯನ್ನೂ ಸೋಲಿಸಬಹುದು ಎಂದು ಬ್ಯಾನರ್ಜಿ ಹೇಳಿದ್ದಾರೆ. 

ಟಿಎಂಸಿಯ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಬಳಿಕ ಪಕ್ಷವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮೇಘಾಲಯ ಹಾಗೂ ಚಂಡೀಗಢದಲ್ಲಿ ಬಿಜೆಪಿಗೆ ಗೆಲ್ಲಲು ಕಾಂಗ್ರೆಸ್ ಸಹಾಯ ಮಾಡಿತ್ತು ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 



Read more

[wpas_products keywords=”deal of the day”]