
ಹೌದು, ಭಾರತದಲ್ಲಿ ದಿನದಿಂದ ದಿನಕ್ಕೆ ಸ್ಮಾರ್ಟ್‌ಫೋನ್‌ಗಳ ಬಳಕೆಯ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದಕ್ಕೆ ತಕ್ಕಂತೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇವೆ. ಇವುಗಳ ನಡುವೆ ಬೆಲೆ ವಿಚಾರದಲ್ಲಿ ಸ್ಮಾರ್ಟ್‌ಫೋನ್‌ಗಳ ನಡುವೆ ಸಾಕಷ್ಟು ಪೈಪೋಟಿಯಿದೆ. ಆದರಿಂದ ಹೆಚ್ಚಿನ ಜನರು ಬಜೆಟ್ ಬೆಲೆ ಹಾಗೂ ಮಿಂಡ್ ರೇಂಜ್ ಪ್ರೈಸ್ ಟ್ಯಾಗ್ ಒಳಗೊಂಡ ಸ್ಮಾರ್ಟ್‌ಫೋನ್ ಖರೀದಿಸುವುದಕ್ಕೆ ಹೆಚ್ಚಿನ ಆಸಕ್ತಿ ವಹಿಸುತ್ತಾರೆ. ಹಾಗಾದ್ರೆ ಪ್ರಸ್ತುತ ಭಾರತದಲ್ಲಿ 20,000ರೂ. ಒಳಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಯಾವುವು? ಅವುಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ ನೋಟ್ 11T 5G
ರೆಡ್ಮಿ ನೋಟ್ 11T 5G ಸ್ಮಾರ್ಟ್‌ಫೋನ್ ಫೆಬ್ರವರಿ ತಿಂಗಳಿನಲ್ಲಿ ನೀವು 20,000ರೂ. ಒಳಗೆ ನೀವು ಖರೀದಿಸಬಹುದಾದ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗದೆ. ಈ ಸ್ಮಾರ್ಟ್‌ಫೋನ್ 5Gಯನ್ನ ಬೆಂಬಲಿಸಲಿದ್ದು, ಭವಿಷ್ಯದ ದೃಷ್ಟಿಯಿಂದ ಉತ್ತಮ ಡಿವೈಸ್ ಎನಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ 17,999ರೂ.ಗಳಿಗೆ ಲಭ್ಯವಿದೆ.

ರಿಯಲ್‌ಮಿ 8 5G
ಇನ್ನು ಈ ತಿಂಗಳಿನಲ್ಲಿ ನೀವು ಖರೀದಿಸಬಹುದಾದ ಮತ್ತೊಂದು ಉತ್ತಮ ಆಯ್ಕೆ ರಿಯಲ್‌ಮಿ 8 5G ಆಗಿದೆ. ಈ ಸ್ಮಾರ್ಟ್‌ಫೋನ್ ಪ್ರಸ್ತುತ ಅಮೆಜಾನ್‌ನಲ್ಲಿ 17,990ರೂ.ಗಳಿಗೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮೋಟೋ G60
ಮೊಟರೊಲಾ ಮೋಟೋ G60 ಸ್ಮಾರ್ಟ್‌ಫೋನ್ ಸ್ಟಾಕ್ ಆಂಡ್ರಾಯ್ಡ್ ಅನುಭವವನ್ನು ನೀಡುವ ಏಕೈಕ ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ 120Hz ಗಿಂತ ಹೆಚ್ಚಿನ ರಿಫ್ರೆಶ್ ರೇಟ್ ಒಳಗೊಂಡಿರುವ 6.8 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 20W ಟರ್ಬೋಚಾರ್ಜರ್ ಬೆಂಬಲಿಸುವ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿ ಒಂದು ವರ್ಷ ವಾಗಿದೆ. ಆದರೂ ಕೂಡ ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯತೆ ಉಳಿಸಿಕೊಂಡಿದೆ. ಭಾರತದಲ್ಲಿ 20,000ರೂ.ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳಲ್ಲಿ ಇದು ಕೂಡ ಉತ್ತಮ ಆಯ್ಕೆಯಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್+ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
Read more…
[wpas_products keywords=”smartphones under 15000 6gb ram”]