
ಹೌದು, ರಿಲಯನ್ಸ್ ಜಿಯೋ ಟೆಲಿಕಾಂ ಹೊಸದಾಗಿ 1ರೂ. ಬೆಲೆಯ ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು ಡೇಟಾ ಪ್ರಯೋಜನವನ್ನು ಮಾತ್ರ ಒಳಗೊಂಡಿದ್ದು, ಯಾವುದೇ ಹೆಚ್ಚುವರಿ ಪ್ರಯೋಜನ ಹೊಂದಿಲ್ಲ. ಅಂದಹಾಗೇ ಈ ಯೋಜನೆಯು ಜಿಯೋ ಮೊಬೈಲ್ ಅಪ್ಲಿಕೇಶನ್ ನಲ್ಲಿ ಮಾತ್ರ ಕಾಣಿಸುತ್ತದೆ. ಜಿಯೋ ವೆಬ್‌ಸೈಟ್‌ನಲ್ಲಿ ಕಾಣಿಸುವುದಿಲ್ಲ. ಹಾಗಾದರೇ ಜಿಯೋ ಟೆಲಿಕಾಂನ 1ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್ ಬಗ್ಗೆ ಹಾಗೂ ಇತರೆ ಅಗ್ಗದ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 1ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನ
ಜಿಯೋ 1ರೂ. ಪ್ರಿಪೇಯ್ಡ್ ಪ್ಲ್ಯಾನಿನಲ್ಲಿ ಬಳಕೆದಾರರಿಗೆ 30 ದಿನಗಳವರೆಗೆ 100MB ಡೇಟಾವನ್ನು ನೀಡುತ್ತದೆ. ಇದಲ್ಲದೇ ಈ ಯೋಜನೆಯಲ್ಲಿ ಯಾವುದೇ ವಾಯಿಸ್ ಕರೆ, ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರುವುದಿಲ್ಲ. (ಜಿಯೋ ಆಪ್ > ರೀಚಾರ್ಜ್ > value > other Plans ಕಾಣಿಸುತ್ತದೆ) ಅತೀ ಕಡಿಮೆ ಡೇಟಾ ಬಳಕೆ ಮಾಡುವ ಗ್ರಾಹಕರಿಗೆ ಈ ಯೋಜನೆಯು ಆಕರ್ಷಕ ಸೂಕ್ತ ಎನಿಸಲಿದೆ.

10ರೂ.ಗೆ 1GB ಡೇಟಾ
ಜಿಯೋ 1ರೂ. ಪ್ರಿಪೇಯ್ಡ್ ಪ್ಲ್ಯಾನ್ ಅನ್ನು ಹತ್ತು ಬಾರಿ ರೀಚಾರ್ಜ್ ಮಾಡುವುದರಿಂದ ಒಟ್ಟು 10ರೂ. ವೆಚ್ಚವಾಗುತ್ತದೆ. ಆದರೆ ಅದು ಬಳಕೆದಾರರಿಗೆ 30 ದಿನಗಳವರೆಗೆ 1GB ಡೇಟಾವನ್ನು ನೀಡುತ್ತದೆ (100MB x 10 = 1GB). ಬೆಲೆ ಹೆಚ್ಚಳದ ಬಳಿಕ ಜಿಯೋದ 1GB 4G ಡೇಟಾ ವೋಚರ್ ಬೆಲೆಯು 15 ರೂ. ಆಗಿದೆ. ಈ ಯೋಜನೆಗೆ ಹೋಲಿಸಿದರೇ, ಜಿಯೋ 1ರೂ. ಪ್ರಿಪೇಯ್ಡ್ ಪ್ಲ್ಯಾನ್ (10ರೂ.ಗೆ 1GB ಡೇಟಾ) ಅಗ್ಗದ ಎನಿಸುತ್ತದೆ. ಹಾಗೆಯೇ ಜಿಯೋ ಟೆಲಿಕಾಂನ ಇತರೆ ಆಕರ್ಷಕ ಪ್ರಿಪೇಯ್ಡ್ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ.

ಜಿಯೋ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 119ರೂ. ಪ್ರಿಪೇಯ್ಡ್ ಪ್ಲ್ಯಾನ್ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್‌ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 21GB ಡೇಟಾ ಪ್ರಯೋಜನ ಸಿಗಲಿದೆ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 395ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112 GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 601ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾ ಪ್ರಯೋಜನ ದೊರೆಯಲಿದೆ.