Karnataka news paper

ಅಮೆಜಾನ್‌ನಲ್ಲಿ ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌!


Deal Of The Day

oi-Mutthuraju H M

ಅಮೆಜಾನ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣವಾಗಿದೆ. ಅಮೆಜಾನ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ವಿಶೇಷ ದಿನಗಳಲ್ಲಿ ಮಾತ್ರವಲ್ಲದೆ ವಿಕೆಂಡ್‌, ಮಂತ್‌ಎಂಡ್‌ನಲ್ಲಿಯೂ ಕೂಡ ವಿಶೇಷ ಡಿಸ್ಕೌಂಟ್‌ ಸೇಲ್‌ಗಳನ್ನು ನಡೆಸುತ್ತಿದೆ. ಈ ಸೇಲ್‌ಗಳಲ್ಲಿ ಸ್ಮಾರ್ಟ್‌ಫೋನ್‌ ಮಾತ್ರವಲ್ಲ ಲ್ಯಾಪ್‌ಟಾಪ್‌, ಸ್ಮಾರ್ಟ್‌ಟಿವಿ ಸೇರಿದಂತೆ ಅನೇಕ ಗ್ಯಾಜೆಟ್ಸ್‌ಗಳ ಮೇಲೆ ಡಿಸ್ಕೌಂಟ್‌ ದೊರೆಯಲಿದೆ.

ಹೌದು, ಅಮೆಜಾನ್‌ ತಾಣದಲ್ಲಿ ವಿಶೇಷ ಡಿಸ್ಕೌಂಟ್‌ ಸೇಲ್‌ಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ಸ್ಮಾರ್ಟ್‌ಫೋನ್‌ಗಳ ಮೇಲೆ ಒಂದಿಲ್ಲೊಂದು ಆಫರ್‌ ದೊರೆಯಲಿದೆ. ಸದ್ಯ ಅಮೆಜಾನ್‌ ತನ್ನ ಪ್ಲಾಟ್‌ಫಾರ್ಮ್‌ ಹಲವು ಮೊಬೈಲ್‌ ಬ್ರಾಂಡ್‌ಗಳ ಸ್ಮಾರ್ಟ್‌ಫೋನ್‌ಗಳಿಗೆ ಡಿಸ್ಕೌಂಟ್‌ ನೀಡುತ್ತಿದೆ. ಇದರಲ್ಲಿ ಒಪ್ಪೋ ಕಂಪೆನಿಯ ಅನೇಕ ಸ್ಮಾರ್ಟ್‌ಫೋನ್‌ಗಳು ಬಿಗ್‌ ಆಫರ್‌ ಪಡೆದುಕೊಂಡಿವೆ. ಹಾಗಾದ್ರೆ ಅಮೆಜಾನ್‌ ಸೇಲ್‌ನಲ್ಲಿ ರಿಯಾಯಿತಿ ಪಡೆದುಕೊಂಡಿರುವ ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಅಮೆಜಾನ್‌ನಲ್ಲಿ ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌!

ಒಪ್ಪೋ F19 ಪ್ರೊ
ಒಪ್ಪೊ F19 ಪ್ರೊ ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸೊಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ P95 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ v11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8MP ವೈಡ್ ಆಂಗಲ್ ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಮೂರನೇ ಕ್ಯಾಮೆರಾ 2MP ಪೋರ್ಟ್ರೇಟ್ ಮೊನೊ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್ ಹೊಂದಿದೆ. ಜೊತೆಗೆ 4310mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 30W ಚಾರ್ಜಿಂಗ್‌ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಮೂಲಬೆಲೆ 23,990ರೂ ಹೊಂದಿದ್ದು, ಅಮೆಜಾನ್‌ ಸೇಲ್‌ನಲ್ಲಿ 8% ಡಿಸ್ಕೌಂಟ್‌ ದೊರೆಯಲಿದ್ದು 21,990ರೂ.ಗಳಿಗೆ ಲಭ್ಯವಾಗಲಿದೆ.

ಒಪ್ಪೋ F19 ಪ್ರೊ+ 5G
ಒಪ್ಪೋ F19 ಪ್ರೊ+ 5G ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ+ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ ಅನುಪಾತ 90.8% ಹೊಂದಿದೆ.ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 800U 5G ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48MP ಸೆನ್ಸಾರ್‌, ಎರಡನೇ ಕ್ಯಾಮೆರಾ 8MP ವೈಡ್ ಆಂಗಲ್ ಮ್ಯಾಕ್ರೋ, ಮೂರನೇ ಕ್ಯಾಮೆರಾ 2MP ಪೋರ್ಟ್ರೇಟ್ ಲೆನ್ಸ್ ಮತ್ತು ನಾಲ್ಕನೇ 2MP ಸೆನ್ಸಾರ್‌ ಹೊಂದಿದೆ. ಜೊತೆಗೆ
50W ಫ್ಲ್ಯಾಶ್ ಚಾರ್ಜಿಂಗ್ ತಂತ್ರಜ್ಞಾನ ಬೆಂಬಲಿಸುವ 4310mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೂಲಬೆಲೆ 29,990ರೂ.ಆಗಿದ್ದು, ಅಮೆಜಾನ್‌ ಸೇಲ್‌ನಲ್ಲಿ ಕೇವಲ 25,990ರೂ.ಗಳಿಗೆ ಲಭ್ಯವಾಗಲಿದೆ.

ಒಪ್ಪೋ A31
ಒಪ್ಪೊ A31 ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ವಾಟರ್‌ಡ್ರಾಪ್ ನಾಚ್ ಮಾದರಿಯನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇಯ ಅನುಪಾತವು 20:9 ಆಗಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.89% ಆಗಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ತ್ರಿವಳಿ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ ಹೊಂದಿದ್ದು, ಹಾಗೂ ತೃತೀಯ ಕ್ಯಾಮೆರಾ ಸಹ 2ಎಂಪಿ ಸೆನ್ಸಾರ್ ಪಡೆದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 4,230 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಒಮ್ಮೆ ಬ್ಯಾಟರಿ ಪೂರ್ಣ ಚಾರ್ಜ್ ಆದರೇ 45 ಗಂಟೆಗಳ ಟಾಕ್‌ಟೈಮ್ ಬ್ಯಾಕ್‌ಅಪ್ ನೀಡುತ್ತದೆ. ಈ ಸ್ಮಾರ್ಟ್‌ಫೋನ್‌ ಮೂಲಬೆಲೆ 15,990ರೂ. ಆಗಿದ್ದು, ಅಮೆಜಾನ್‌ ಸೇಲ್‌ನಲ್ಲಿ 12,990ರೂ.ಗಳಿಗೆ ಲಭ್ಯವಾಗಲಿದೆ.

ಒಪ್ಪೋ A74 5G
ಒಪ್ಪೋ A74 5G ಸ್ಮಾರ್ಟ್‌ಫೋನ್‌ 6.49 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಂಚ್‌ ಹೋಲ್‌ ವಿನ್ಯಾಸವನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 5G SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 11ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೂಲ ಬೆಲೆ 20,990ರೂ. ಆಗಿದ್ದು, ಅಮೆಜಾನ್‌ ಸೇಲ್‌ನಲ್ಲಿ ಕೇವಲ 16,990ರೂ.ಗಳಿಗೆ ಲಭ್ಯವಾಗಲಿದೆ.

ಒಪ್ಪೋ A16k
ಒಪ್ಪೋ A16K ಸ್ಮಾರ್ಟ್‌ಫೋನ್‌ 6.52 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ IPS LCD ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ ColorOS 11.1 Lite ಜೊತೆಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಅಲ್ಲದೆ ಇದು 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,230mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ M.R.P ಬೆಲೆ 13,990ರೂ ಆಗಿದ್ದು, ಅಮೆಜಾನ್‌ನಲ್ಲಿ 10,490ರೂ.ಗಳಿಗೆ ಲಭ್ಯವಾಗಲಿದೆ.

ಒಪ್ಪೋ A16
ಒಪ್ಪೋ A16 ಸ್ಮಾರ್ಟ್‌ಫೋನ್‌ 6.52-ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೆ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮೊನೊ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಪ್ರಸ್ತುತ 15,990ರೂ ಮೂಲಬೆಲೆ ಹೊಂದಿದ್ದು, ಅಮೆಜಾನ್‌ನಲ್ಲಿ 13,490ರೂ.ಗಳಿಗೆ ಲಭ್ಯವಾಗಲಿದೆ.

ಒಪ್ಪೋ A54
ಒಪ್ಪೋ A54 ಸ್ಮಾರ್ಟ್‌ಫೋನ್ 6.51 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಮೂಲಬೆಲೆ 14,990ರೂ.ಆಗಿದ್ದು ಅಮೆಜಾನ್‌ನಲ್ಲಿ 13,990ರೂ.ಗಳಿಗೆ ಲಭ್ಯವಾಗಲಿದೆ.

ಒಪ್ಪೋ ರೆನೋ 6 ಪ್ರೊ 5G
ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಒಪ್ಪೋ ರೆನೋ 6 5G
ಒಪ್ಪೋ ರೆನೋ 6 5G ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಸೂಪರ್ VOOC ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.



Read more…

[wpas_products keywords=”smartphones under 15000 6gb ram”]