Karnataka news paper

Karnataka Covid-19 Update: 16,436 ಹೊಸ ಪ್ರಕರಣ, 60 ಮಂದಿ ಸೋಂಕಿತರು ಸಾವು


ಬೆಂಗಳೂರು: ರಾಜ್ಯದಲ್ಲಿ ಗುರುವಾರ 16,436 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 60 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 38,60,774 ಕ್ಕೆ ಏರಿಕೆಯಾಗಿದೆ. ಆ ಪೈಕಿ 39,197 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 36,72,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,48,800 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ 11.31 ರಷ್ಟಿದ್ದು, ಮರಣ ಪ್ರಮಾಣ ಶೇ 0.36 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 6,640 ಹೊಸ ಪ್ರಕರಣ ಪತ್ತೆಯಾಗಿದ್ದು, 14 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರು 706, ಶಿವಮೊಗ್ಗ 701, ತುಮಕೂರು 572, ಉತ್ತರ ಕನ್ನಡ 567, ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ 535 ಪ್ರಕರಣಗಳು ದೃಢಪಟ್ಟಿವೆ.



Read more from source

[wpas_products keywords=”deal of the day sale today kitchen”]