The New Indian Express
ಬೆಂಗಳೂರು: ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರ ಮೇಲೆ ಕೇಳಿಬರುತ್ತಿರುವ ಲೈಂಗಿಕ ಕಿರುಕುಳ ಆರೋಪದ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಲು ವಿಶೇಷ ತನಿಖಾ ತಂಡ(SIT)ಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಕೇಸು ದಾಖಲಾಗಿದೆ.
ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಲಾಗಿದೆ. ಅಂತಿಮ ವರದಿ ಸಲ್ಲಿಕೆಗೆ ಎಸ್ಐಟಿ ಅವಕಾಶ ಕೋರಿತ್ತು. ಸದ್ಯ ಎಸ್ಐಟಿ ತನಿಖೆ ಪ್ರಶ್ನಿಸಿರುವ ಯುವತಿಯ ಅರ್ಜಿ ಬಗ್ಗೆ ಇಂದು ವಿಚಾರಣೆ ನಡಿಸಿದ ಕೋರ್ಟ್ ತನಿಖಾ ವರದಿ ಸಲ್ಲಿಸಲು ತಿಳಿಸಿದೆ.
ಇದೀಗ ಎಸ್ ಟಿ ಸಲ್ಲಿಸುವ ಅಂತಿಮ ವರದಿ ಮೇಲೆ ರಮೇಶ್ ಜಾರಕಿಹೊಳಿ ಭವಿಷ್ಯ ನಿಂತಿದೆ. ಲೈಂಗಿಕ ಕಿರುಕುಳದ ಸೆಕ್ಸ್ ಸಿಡಿ ಬಹಿರಂಗವಾದ ಹಿನ್ನೆಲೆಯಲ್ಲಿ ಕಳೆದ ವರ್ಷ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
#JUSTIN #Karnataka HC permits SIT to submit final report to magistrate court wrt crime regd by Cubbon Park pol on sex scandal allegedly involving @RameshJarkiholi @XpressBengaluru @santwana99 @DgpKarnataka @CPBlr @CMofKarnataka @BJP4Karnataka @KPCCPresident @JanataDal_S
— Yathiraju_TNIE/ಯತಿರಾಜು (@rajaarushi) February 3, 2022
Read more
[wpas_products keywords=”deal of the day”]