ಮಾತ್ರವಲ್ಲ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಈ ಹಿಂದೆ ಘೋಷಿಸಲಾದ ಕೆಟಗರಿಯಂತೆ ಮುಂದಿನ ಒಂದು ತಿಂಗಳ ಒಳಗಾಗಿ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದೆ. ಕಲಬುರಗಿ ಮಹಾನಗರ ಪಾಲಿಕೆ 55 ವಾರ್ಡ್‌ಗಳನ್ನು ಒಳಗೊಂಡಿದೆ. ಚುನಾವಣೆಯಲ್ಲಿ ಕಾಂಗ್ರೆಸ್ 27, ಬಿಜೆಪಿ 23 ಸ್ಥಾನಗಳಲ್ಲಿ ಜಯ ಗಳಿಸಿದೆ. ಜೆಡಿಎಸ್ 4 ಸ್ಥಾನದಲ್ಲಿ ಜಯ ಗಳಿಸಿದೆ.
ಯಾವುದೇ ಪಕ್ಷ ಅಧಿಕಾರ ಹಿಡಿಯಲು 28 ಸದಸ್ಯ ಬಲದ ಅಗತ್ಯವಿದೆ. ಸ್ವಂತ ಬಲದ ಮೇಲೆ ಯಾವುದೇ ಪಕ್ಷ ಮೇಯರ್ ಪಟ್ಟ ಪಡೆಯದಂತೆ ಅತಂತ್ರ ಫಲಿತಾಂಶ ಬಂದಿತ್ತು. ಹೀಗಾಗಿ ಜೆಡಿಎಸ್ ಪಕ್ಷ ಇತರ ಪಕ್ಷಗಳಿಗೆ ಬೆಂಬಲ ನೀಡಲು ಮೇಯರ್ ಪಟ್ಟ ತನಗೆ ನೀಡಬೇಕು ಎಂದು ಬೇಡಿಕೆ ಇಟ್ಟಿತ್ತು. ಇದಕ್ಕೆ ಕಾಂಗ್ರೆಸ್ ಬಿಜೆಪಿಯ ಒಪ್ಪಿಗೆ ಇರಲಿಲ್ಲ.
ಈ ಹಿನ್ನಲೆ ಬಿಜೆಪಿ ಕಲಬುರಗಿ ಜಿಲ್ಲೆಯ ತನ್ನ ಐದು ಜನ ವಿಧಾನ ಪರಿಷತ್ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿಸಿ ಮೇಯರ್ ಗದ್ದುಗೆ ಹಿಡಿಯಲು ಪ್ಲ್ಯಾನ್ ರೂಪಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿತ್ತು. ಆದ್ರೆ ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಅಲ್ಲದೆ ಈ ಮುಂಚೆ ಪಾಲಿಕೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪ ಮೇಯರ್ ಸ್ಥಾನವು ಒಬಿಸಿಗೆ ನಿಗದಿಯಾಗಿತ್ತು. ಇದರಲ್ಲಿ ಯಾವುದೇ ಬದಲಾವಣೆ ಮಾಡದೆ ಚುನಾವಣೆ ನಡೆಸಲು ಹೈಕೋರ್ಟ್ ಸೂಚಿಸಿದೆ. ಇದರೊಂದಿಗೆ ಫೆಬ್ರುವರಿ 05 ರಂದು ನಿಗದಿಯಾಗಿದ್ದ ಮೇಯರ್ ಚುನಾವಣೆ ಮುಂದೂಡಿದಂತಾಗಿದೆ.
Read more
[wpas_products keywords=”deal of the day sale today offer all”]