ಹೈಲೈಟ್ಸ್:
- ಉಪ್ಪಿನಂಗಡಿಯಲ್ಲಿ ಗಲಭೆ ಪ್ರಕರಣ
- ಆರಗ ಜ್ಞಾನೇಂದ್ರರನ್ನು ಭೇಟಿಯಾದ ದ.ಕ ಭಾಗದ ಶಾಸಕರು
- ಗೃಹ ಸಚಿವರ ಮುಂದೆ ಆತಂಕ ವ್ಯಕ್ತಪಡಿಸಿದ ಶಾಸಕರು
ನೆರೆಯ ಕೇರಳ ರಾಜ್ಯದಿಂದ ಆಗಮಿಸಿ, ಸ್ಥಳೀಯರ ಜೊತೆಗೆ ಸೇರಿಕೊಂಡು ಕೋಮು ಸಾಮರಸ್ಯ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದೂ, ಬಿಜೆಪಿ ಶಾಸಕರ ನಿಯೋಗ, ಸಚಿವರಲ್ಲಿ ಮನವಿ ಮಾಡಿದೆ. ನಿಯೋಗದಲ್ಲಿ, ಸಚಿವ ಅಂಗಾರ, ಹರೀಶ್ ಪೂಂಜಾ, ಸಂಜೀವ್ ಮಠಂದೂರು, ರಾಜೇಶ್ ನಾಯಕ್, Dr ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಪ್ರತಾಪಸಿಂಹ ನಾಯಕ್ ಎಂಎಲ್ಸಿ, ನಿಯೋಗದಲ್ಲಿ ಇದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಕೋಮು ಆಧಾರಿತ ಘಟನೆಗಳು ನಡೆದಿವೆ. ಜಿಲ್ಲೆಯ ಉಪ್ಪಿನಂಗಡಿಯಲ್ಲೂ ಹೊಡೆದಾಟಗಳು ನಡೆದಿವೆ. ಮಂಗಳವಾರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದ ಪಿಎಫ್ ಐ ಕಾರ್ಯಕರ್ತರ ಮೇಲೆ ಪೊಲೀಸ್ ಲಾಠಿ ಚಾರ್ಜ್ ನಡೆದಿತ್ತು.
ಉಪ್ಪಿನಂಗಡಿಯಲ್ಲಿ ಪೊಲೀಸ್ ಸರ್ಪಗಾವಲು!
ಮಂಗಳವಾರದಂದು ಪ್ರತಿಭಟನೆ, ಲಾಠಿ ಚಾರ್ಚ್‌ಗೆ ಕಾರಣವಾಗಿದ್ದ ಉಪ್ಪಿನಂಗಡಿಯಲ್ಲಿ 144ನೇ ಸೆಕ್ಷನ್ ಜಾರಿಯಲ್ಲಿದ್ದು, ಪೇಟೆ ಶಾಂತ ಸ್ಥಿತಿಯಲ್ಲಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಉಪ್ಪಿನಂಗಡಿಗೆ ಉಡುಪಿ ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಿಂದ ಪೊಲೀಸರನ್ನು ಕರೆಸಲಾಗಿದ್ದು, ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ.
ಲಾಠಿಚಾರ್ಜ್ ಬಳಿಕ ಉಪ್ಪಿನಂಗಡಿಯಲ್ಲಿ ಪೊಲೀಸ್ ಸರ್ಪಗಾವಲು; ಸಹಜ ಸ್ಥಿತಿಗೆ ಮರಳಿದ ಪೇಟೆ
ಇಲ್ಲಿನ ಹಳೆಗೇಟ್‌ನ ಸುಬ್ರಹ್ಮಣ್ಯ ಕ್ರಾಸ್ ಬಳಿ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದ ಮೂವರು ಪಿಎಫ್‌ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮಂಗಳವಾರ ಬೆಳಗ್ಗೆಯಿಂದಲೇ ಉಪ್ಪಿನಂಗಡಿಯಲ್ಲಿ ಪೊಲೀಸ್ ಠಾಣೆಯ ಮುಂಭಾಗ ಪಿಎಫ್‌ಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ನಿರತರಾಗಿದ್ದರು. ರಾತ್ರಿ ವಶಕ್ಕೆ ಪಡೆದವರಲ್ಲಿ ಓರ್ವ ಮುಖಂಡನನ್ನು ಬಿಡುಗಡೆಗೊಳಿಸಲಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತಹಶೀಲ್ದಾರ್ ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.