Karnataka news paper

ಯಾವೆಲ್ಲಾ ನಟ ನಟಿಯರಿಗೆ ಕೋವಿಡ್‌ ಪಾಸಿಟಿವ್‌? ಇಲ್ಲಿದೆ ಮಾಹಿತಿ…


ಮುಂಬೈ: ಬಾಲಿವುಡ್‌ ಸೇರಿದಂತೆ ದಕ್ಷಿಣ ಭಾರತದ ಸಿನಿಮಾ ಸೆಲೆಬ್ರಿಟಿಗಳಿಗೆ ಕೋವಿಡ್‌ ದೃಢಪಟ್ಟಿದೆ. 

ಈಗಾಗಲೇ ದೇಶದಲ್ಲಿ ಕೊರೊನಾ ರೂಪಾಂತರ ತಳಿ ‘ಓಮೈಕ್ರಾನ್‌’ ಕಾಣಿಸಿಕೊಂಡಿರುವುದರಿಂದ ಜನರಲ್ಲಿ ಆತಂಕ ಮೂಡಿಸಿದೆ. ಇದರ ಬೆನ್ನಲೇ ಸಿನಿಮಾ ಮಂದಿಗೆ ಕೋವಿಡ್‌ ಕಾಣಿಸಿಕೊಂಡಿದೆ.

ಬಾಲಿವುಡ್ ನಟಿಯರಾದ ಕರೀನಾ ಕಪೂರ್‌ ಖಾನ್‌ ಮತ್ತು ಅಮೃತಾ ಅರೋರಾ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಅವರು ಈಗಾಗಲೇ ಕ್ವಾರಂಟೈನ್‌ನಲ್ಲಿ ಇದ್ದು ನಮ್ಮ ನೇರ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡಬೇಕು ಎಂದು ಮನವಿ ಮಾಡಿದ್ದಾರೆ.

ತಮಿಳು ಹಾಗೂ ತೆಲುಗಿನ ಖ್ಯಾತ ನಟ ಅರ್ಜುನ್‌ ಸರ್ಜಾ ಅವರಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ. ಅವರೂ ಸಹ ಕ್ವಾರಂಟೈನ್‌ನಲ್ಲಿದ್ದು ನನ್ನ ನೇರ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡಬೇಕು ಎಂದು ಮನವಿ ಮಾಡಿದ್ದಾರೆ.

ಅರ್ಜುನ್‌ ಸರ್ಜಾ ಅವರು ತಮಿಳುನ ಖಾಸಗಿ ವಾಹಿನಿಯಲ್ಲಿ ನಿರೂಪಕರಾಗಿ ಕೆಲಸ ಮಾಡುತ್ತಿದ್ದರು.

ಕೆಲ ದಿನಗಳ ಹಿಂದೆ ನಟ ಕಮಲ ಹಾಸನ್‌ ಅವರಿಗೂ ಕೋವಿಡ್‌ ದೃಢಪಟ್ಟಿತ್ತು. ಸದ್ಯ ಅವರು ಗುಣಮುಖರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



Read More…Source link