Karnataka news paper

ಗೋವಾದಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ: ಶಿವಸೇನಾ ನಾಯಕ ಸಂಜಯ್ ರಾವತ್


PTI

ಮುಂಬೈ: ಫೆಬ್ರವರಿ 14 ರ ಗೋವಾ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಅವರು ಶುಕ್ರವಾರ ಹೇಳಿದ್ದಾರೆ.

ರಾವತ್ ಅವರ ಸ್ವಂತ ಪಕ್ಷ ಶಿವಸೇನೆ ಗೋವಾದಲ್ಲಿ ಎನ್‌ಸಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಅಧಿಕಾರ ಹಂಚಿಕೊಂಡಿವೆ.

ಇದನ್ನು ಓದಿ: ಗೋವಾ ಚುನಾವಣೆ: ಭ್ರಷ್ಟಾಚಾರ, ಪಕ್ಷಾಂತರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪ್ರಮಾಣ ಪತ್ರಕ್ಕೆ ಆಪ್ ಅಭ್ಯರ್ಥಿಗಳ ಸಹಿ!

“ಕಾಂಗ್ರೆಸ್ ಪಕ್ಷ ಗೋವಾದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆಡಳಿತರೂಢ ಬಿಜೆಪಿ ಈ ಚುನಾವಣೆಯಲ್ಲಿ ನಿರ್ಣಾಯಕ ಮುನ್ನಡೆಯನ್ನು ಪಡೆಯುವುದಿಲ್ಲ” ಎಂದು ಶಿವಸೇನಾ ನಾಯಕ ಮರಾಠಿ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

“ಗೋವಾದಲ್ಲಿ ಗ್ರೌಂಡ್ ರಿಯಾಲಿಟಿ ಬಿಜೆಪಿ ಅಥವಾ ಅದರ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಅವರ ಪರವಾಗಿಲ್ಲ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಗೆಲ್ಲುವುದಿಲ್ಲ” ಎಂದು ಶಿವಸೇನೆ ನಾಯಕ ಹೇಳಿದ್ದಾರೆ.

ಗಮನಾರ್ಹ ವಿಚಾರವೆಂದರೆ, ಕಳೆದ ಬಾರಿ ಗೋವಾದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು. ಆದರೆ ಸರ್ಕಾರ ರಚಿಸಲು ಸಾಧ್ಯವಾಗಿರಲಿಲ್ಲ. ಬಿಜೆಪಿಯು ಸಣ್ಣ ಪಕ್ಷಗಳೊಂದಿಗೆ ತ್ವರಿತವಾಗಿ ಮೈತ್ರಿ ಮಾಡಿಕೊಳ್ಳುವ ಮೂಲಕ ಸರ್ಕಾರ ರಚಿಸಿತ್ತು.



Read more

[wpas_products keywords=”deal of the day”]