Karnataka news paper

ವೆಸ್ಟ್ ಇಂಡೀಸ್- ಭಾರತ ಏಕದಿನ ಸರಣಿಗೆ ಮಯಾಂಕ್ ಅಗರ್ವಾಲ್ ಆಯ್ಕೆ: ಬಿಸಿಸಿಐ


Online Desk

ಅಹಮದಾಬಾದ್:  ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ. ಟೀಂ ಇಂಡಿಯಾದ ಹಲವು ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಬಿಸಿಸಿಐ ಮಾಯಾಂಕ್ ಅಗರ್ವಾಲ್ ಅವರನ್ನು ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಿದೆ.

ಟೀಂ ಇಂಡಿಯಾದ ಆರಂಭಿಕ ಜೋಡಿ ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸ್ಟ್ಯಾಂಡ್ ಬೈ ವೇಗಿ ಸೈನಿ ಮತ್ತಿತರರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಇದರಿಂದಾಗಿ ಅವೆಲ್ಲರೂ ವೈದ್ಯರ ಮೇಲ್ವಿಚಾರಣೆಯಲ್ಲಿ ಹೋಟೆಲ್ ನಲ್ಲಿ ಪ್ರತ್ಯೇಕವಾಗಿ ಕಾಲ ಕಳೆಯುತ್ತಿದ್ದಾರೆ. ವಿಂಡೀಸ್ ವಿರುದ್ಧದ ಸರಣಿಗೆ ನಾಯಕ ರೋಹಿತ್ ಶರ್ಮಾ ಲಭ್ಯವಿದ್ದು, ಆರಂಭಿಕರಾಗಿ ಕಣಕ್ಕೆ ಇಳಿಯಲಿದ್ದಾರೆ.

ಇದನ್ನೂ ಓದಿ: ವೆಸ್ಟ್ ಇಂಡೀಸ್ ಸರಣಿಗು ಮುನ್ನ ಟೀಂ ಇಂಡಿಯಾಗೆ ಕೊರೋನಾ ಶಾಕ್: ಮೂವರು ಕ್ರಿಕೆಟಿಗರಿಗೆ ಪಾಸಿಟಿವ್

ರೋಹಿತ್ ಶರ್ಮಾ- ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೂರು ದಿನಗಳ ಕ್ವಾರಂಟೈನ್ ಬಳಿಕ ಮಯಾಂಕ್ ಅಗರ್ವಾಲ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇನ್ನೊಂದೆಡೆ ಟೀಂ ಇಂಡಿಯಾ ಆಟಗಾರರು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಭ್ಯಾಸವನ್ನು ಆರಂಭಿಸಿದ್ದಾರೆ. 

ಫೆಬ್ರವರಿ 6,9 ಮತ್ತು 11 ರಂದು ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಕದಿನ ಸರಣಿಯನ್ನು ಆಯೋಜಿಸಲಾಗಿದೆ. ನಂತರ 16, 18 ಮತ್ತು 20 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಟಿ-20 ಸರಣಿಯ ಮೂರು ಪಂದ್ಯಗಳು ನಡೆಯಲಿವೆ.



Read more…

[wpas_products keywords=”deal of the day sports items”]