Karnataka news paper

ಯುಪಿ ಚುನಾವಣೆ: ಗೋರಖ್ ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಉಮೇದುವಾರಿಕೆ ಸಲ್ಲಿಕೆ


PTI

ಗೋರಖ್ ಪುರ: ರಾಷ್ಟ್ರದಾದ್ಯಂತ ತೀವ್ರ ಗಮನ ಸೆಳೆದಿರುವ ಉತ್ತರ ಪ್ರದೇಶದ ಗೋರಖ್ ಪುರ ನಗರ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಚುನಾವಣಾ ರ‍್ಯಾಲಿ ನಂತರ ಅಮಿತ್ ಶಾ ಜೊತೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಯೋಗಿ ಆದಿತ್ಯನಾಥ್,  ತಮ್ಮ ಉಮೇದುವಾರಿಕೆ ಪತ್ರ ಸಲ್ಲಿಸಿದರು.

ಯೋಗಿ ಆದಿತ್ಯನಾಥ್ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ಗೋರಖ್ ಪುರ  ಲೋಕಸಭಾ ಕ್ಷೇತ್ರದಿಂದ ಐದು ಬಾರಿ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. ಗೋರಖ್ ಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಮಾರ್ಚ್ 3 ರಂದು ಚುನಾವಣೆ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ ಜನತೆಯ ಆಶೀರ್ವಾದದೊಂದಿಗೆ ಮತ್ತೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.





Read more

[wpas_products keywords=”deal of the day”]