Karnataka news paper

ಐಫೋನ್‌ 11 ಖರೀದಿಸುವವರಿಗೆ ಇಲ್ಲಿದೆ ಬಿಗ್‌ ಡಿಸ್ಕೌಂಟ್‌!


ಫ್ಲಿಪ್‌ಕಾರ್ಟ್

ಹೌದು, ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್‌ ಪ್ಲಾಟ್‌ಫಾರ್ಮ್‌ಗಳು ಐಫೋನ್‌ 11 ಖರೀದಿಸುವವರಿಗೆ ಗುಡ್‌ ನ್ಯೂಸ್‌ ನೀಡಿವೆ. ಖರೀದಿದಾರರಿಗೆ ಎಕ್ಸ್‌ಚೇಂಜ್‌ ಆಫರ್‌ ಜೊತೆಗೆ ಕ್ಯಾಶ್‌ಬ್ಯಾಕ್ ಮತ್ತು ವಿಶೇಷ ಆಫರ್‌ಗಳನ್ನು ನೀಡುತ್ತಿದೆ. ಇದಲ್ಲದೆ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸುವವರಿಗೆ 5% ಡಿಸ್ಕೌಂಟ್‌ ದೊರೆಯಲಿದೆ. ಇದರಿಂದಾಗಿ ಐಫೋನ್‌ 11 ಬೆಲೆ ಇನ್ನಷ್ಟು ಕಡಿಮೆಯಾಗಲಿದೆ. ಹಾಗಾದ್ರೆ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್‌ 11 ಮೇಲೆ ಡಿಸ್ಕೌಂಟ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಅಮೆಜಾನ್

ಅಮೆಜಾನ್

ಅಮೆಜಾನ್ ಇಂಡಿಯಾದಲ್ಲಿ ಐಫೋನ್‌ 11 ಖರೀದಿದಾರರು ವಿಶೇಷ ಡಿಸ್ಕೌಂಟ್‌ ನೀಡಿದೆ. ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಎಕ್ಸ್‌ಚೇಂಜ್‌ ಮೇಲೆ 15,000ರೂ. ವರೆಗೆ ಕ್ಯಾಶ್‌ಬ್ಯಾಕ್ ಪಡೆಯಬಹುದು. ಇದಲ್ಲದೆ, ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌, ಕೋಟಾಕ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಮತ್ತು ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳ ಮೇಲೆ 4,000ರೂ.ಗಳ ತನಕ ಡಿಸ್ಕೌಂಟ್‌ ದೊರೆಯಲಿದೆ. ರಿಯಾಯಿತಿ ಇದೆ. ಅಂದರೆ ನಿಮ್ಮ ಸ್ಮಾರ್ಟ್‌ಫೋನ್‌ ಎಕ್ಸಚೇಂಜ್ ಆಫರ್‌ನಲ್ಲಿ 15,000ರೂ ತನಕ ಕ್ಯಾಶ್‌ಬ್ಯಾಕ್‌ ಆಫರ್‌ ಪಡೆದುಕೊಂಡರೆ, ಐಫೋನ್‌ 11 ಅನ್ನು ಅಮೆಜಾನ್‌ನಲ್ಲಿ 30,900 ರೂ. ಬೆಲೆಯಲ್ಲಿ ಖರೀದಿಸಬಹುದು.

ಫ್ಲಿಪ್‌ಕಾರ್ಟ್‌

ಫ್ಲಿಪ್‌ಕಾರ್ಟ್‌

ಫ್ಲಿಪ್‌ಕಾರ್ಟ್‌ನಲ್ಲಿಯೂ ಕೂಡ ಐಫೋನ್ 11ರ ಬೆಲೆ 49,900 ರೂ. ಆಗಿದೆ. ಆದರೆ ಸ್ಮಾರ್ಟ್‌ಫೋನ್‌ ಎಕ್ಸ್‌ಚೇಂಜ್‌ ಆಫರ್‌ ಮೂಲಕ 18,850ರೂ. ತನಕ ಆಫರ್‌ ಪಡೆಯಬಹುದು. ಇದರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 11 ನಿಮಗೆ 31,050ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಾಗಲಿದೆ. ಇದಲ್ಲದೆ ಖರೀದಿದಾರರು ‘ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್’ ಕ್ರೆಡಿಟ್ ಕಾರ್ಡ್ ಅನ್ನು ಹೊಂದಿದ್ದರೆ 5% ತನಕ ಕ್ಯಾಶ್‌ಬ್ಯಾಕ್ ಆಫರ್‌ ಕೂಡ ಪಡೆಯಬಹುದು.

ಐಫೋನ್‌ 11 ಫೀಚರ್ಸ್‌

ಐಫೋನ್‌ 11 ಫೀಚರ್ಸ್‌

ಇನ್ನು ಐಫೋನ್ 11 ಫೋನ್ 1792 × 828-ಪಿಕ್ಸೆಲ್ ರೆಸಲ್ಯೂಶನ್‌ ಸಾಮರ್ಥ್ಯದ 6.1 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ವೇಗದ ಚಿಪ್‌ಸೆಟ್‌ ಬೆಂಬಲದೊಂದಿಗೆ A13 ಬಯೋನಿಕ್ ಪ್ರೊಸೆಸರ್‌ ಪಡೆದುಕೊಂಡಿದ್ದು, ಈ ಬಯೋನಿಕ್ ಚಿಪ್ 8.5 ಬಿಲಿಯನ್ ಟ್ರಾನ್ಸಿಸ್ಟರ್‌ಗಳನ್ನು ಹೊಂದಿದೆ. ಈ ಐಫೋನ್‌ ಡ್ಯುಯಲ್ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಎರಡು ಕ್ಯಾಮೆರಾಗಳು 12 ಮೆಗಾ ಪಿಕ್ಸಲ್ ಸೆನ್ಸಾರ್‌ ಬೆಂಬಲವನ್ನು ಪಡೆದಿವೆ. ಇದರೊಂದಿಗೆ ನೈಟ್‌ಮೋಡ್‌, 4K ವಿಡಿಯೊ, ಸ್ಲೋ ಮೋಶನ್ ಫೀಚರ್ಸ್‌ಗಳನ್ನು ಪಡೆದಿದೆ. ಇನ್ನು ಇದರ ಬ್ಯಾಟರಿ ಬ್ಯಾಕ್‌ಅಪ್‌ ಆಪಲ್‌ ಐಫೋನ್ ಎಕ್ಸ್‌ಆರ್‌ ಫೋನ್‌ ಗಿಂತ ಅಧಿಕವಾಗಿದೆ.



Read more…

[wpas_products keywords=”smartphones under 15000 6gb ram”]