The New Indian Express
ಮೈಸೂರು: ಅತೃಪ್ತ ಎಂಎಲ್‌ಸಿ ಹಾಗೂ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನಲ್ಲಿಯೇ ಇರುವಂತೆ ಮನವರಿಕೆ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಅವರು ಗುರುವಾರ ಹೇಳಿದ್ದಾರೆ.
ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು ಈ ಹಿಂದೆ ಇಬ್ರಾಹಿಂ ಅವರು ಹೇಳಿದ್ದರು. ಫೆಬ್ರುವರಿ 14 ರಂದು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು.
ಇದನ್ನೂ ಓದಿ: ಎಂಎಲ್ ಸಿ ಸ್ಥಾನಕ್ಕೆ ರಾಜಿನಾಮೆ ನೀಡಲು ಮೂಹೂರ್ತ ಫಿಕ್ಸ್; ‘ಅಲಿಂಗ’ ಚಳವಳಿ ಆರಂಭಕ್ಕೆ ಸಿದ್ಧತೆ: ಸಿಎಂ ಇಬ್ರಾಹಿಂ
ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತನ್ವೀರ್ ಸೇಠ್ ಅವರು, ಪಕ್ಷದ ನಾಯಕರಿಗೆ ಅವರ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಉನ್ನತ ಹುದ್ದೆಗಳನ್ನು ನೀಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿ ಇಲ್ಲ. ಶೀಘ್ರದಲ್ಲೇ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಅವರು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇಷ್ಟು ವರ್ಷ ಜನರು ಕಾಂಗ್ರೆಸ್‌ಗೆ ಮತ ಹಾಕಿದ್ದು, ಅದರ ಕಾರ್ಯಕ್ರಮಗಳ ಆಧಾರದ ಮೇಲೆಯೇ ಹೊರತು ಧರ್ಮ ಅಥವಾ ಜಾತಿಯ ಆಧಾರದಲ್ಲಿ ಅಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಅಲ್ಪಸಂಖ್ಯಾತರ ಅನುದಾನ ಹಂಚಿಕೆಯಲ್ಲಿ ವ್ಯತ್ಯಯವಾಗಿದೆ ಎಂಬ ಇಬ್ರಾಹಿಂ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿ, ಕಾನೂನು ರಚಿಸುವಾಗ ಈ ಸಮಸ್ಯೆಯನ್ನು ಇಬ್ರಾಹಿಂ ಪ್ರಸ್ತಾಪಿಸಬಹುದಿತ್ತು ಎಂದಿದ್ದಾರೆ.
ಇದನ್ನೂ ಓದಿ: ನನ್ನ ನೇಮಕಕ್ಕೂ ಇಬ್ರಾಹಿಂ ಅಸಮಾಧಾನಕ್ಕೂ ಸಂಬಂಧವಿಲ್ಲ: ಯುಟಿ ಖಾದರ್
ಬಳಿಕ ಇಬ್ರಾಹಿಂ ಅವರನ್ನು ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಯಾವುದೇ ಪ್ರಯತ್ನ ಮಾಡಿಲ್ಲ ಎಂಬ ಆರೋಪವನ್ನು ಅವರು ತಳ್ಳಿಹಾಕಿದ ಅವರು. ಈ ರೀತಿ ಮಾತನಾಡೋದು ತಪ್ಪು ಎಂದು ಹೇಳಿ, ಸಿದ್ದರಾಮಯ್ಯ ವಿರುದ್ಧದ ಹೇಳಿಕೆಯನ್ನ ಖಂಡಿಸಿದರು.
ಈ ಹಿಂದೆ ಕೂಡ ಇಬ್ರಾಹಿಂ ಅವರು ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದಾಗ ಪಕ್ಷದಲ್ಲೇ ಉಳಿಯುವಂತೆ ಮನವರಿಕೆ ಮಾಡಿದ್ದರು ಎಂದು ಹೇಳಿದರು.
Read more
[wpas_products keywords=”deal of the day”]