Karnataka news paper

ಧರ್ಮ ಪಾಲಿಸಲು ಯಾರೂ ಶಾಲೆಗೆ ಬರಬಾರದು: ಹಿಜಾಬ್ ವಿವಾದ ಕುರಿತು ಆರಗ ಜ್ಞಾನೇಂದ್ರ ಹೇಳಿಕೆ


The New Indian Express

ಬೆಂಗಳೂರು/ಮಂಗಳೂರು: ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಿಜಾಬ್ ಅಥವಾ ಕೇಸರಿ ಶಾಲು ಧರಿಸಬಾರದು. ನಿಗದಿತ ಸಮವಸ್ತ್ರವನ್ನು ಮಾತ್ರ ಧರಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ. 

ಉಡುಪಿ ಸರ್ಕಾರಿ ಪಿಯು ಕಾಲೇಜಿನ ಹಿಜಾಬ್ ವಿವಾದ ಕುರಿತು ಮಾತನಾಡಿರುವ ಅವರು, ಶಿಕ್ಷಣ ಸಂಸ್ಥೆಗಳು ಧರ್ಮ ಮತ್ತು ಜಾತಿಯ ಅಡೆತಡೆಗಳನ್ನು ನಿವಾರಿಸಿ ಎಲ್ಲರೂ ಒಂದೇ ಎಂಬ ಭಾವನೆಯನ್ನು ಬೆಳೆಸಬೇಕು. ದೇವಾಲಯಗಳು, ಚರ್ಚ್‌ಗಳು ಮತ್ತು ಮಸೀದಿಗಳಂತಹ ಪ್ರಾರ್ಥನಾ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಅನುಸರಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಏಕತೆಯ ಭಾವನೆಯನ್ನು ಹೊಂದಬೇಕು ಮತ್ತು ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯ ಸಂಸ್ಕೃತಿಯನ್ನು ಬೆಳೆಸಲು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಾತಾವರಣ ಇರಬೇಕು ಎಂದು ಹೇಳಿದ್ದಾರೆ. 

ಇದನ್ನೂ ಓದಿ: ತಾರಕಕ್ಕೇರಿದ ಉಡುಪಿ ಹಿಜಾಬ್ ವಿವಾದ: ಕಾಲೇಜು ವರ್ತನೆ ವಿರುದ್ಧ ಶಶಿ ತರೂರ್, ಮೆಹಬೂಬಾ ಮುಫ್ತಿ ಕಿಡಿ

ಇದೇ ವೇಳೆ ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರತಿಯಾಗಿ ಕೆಲ ಹಿಂದೂ ವಿದ್ಯಾರ್ಥಿಗಳೂ ಕೂಡ ಕೇಸರಿ ಶಾಲುಗಳನ್ನು ಧರಿಸಿದ ಕುರಿತು ಪ್ರತಿಕ್ರಿಯೆ ನೀಡಿ, ಯಾರೂ ತಮ್ಮ ಧರ್ಮವನ್ನು ಆಚರಿಸಲು ಶಾಲೆಗೆ ಬರಬಾರದು ಎಂದು ತಿಳಿಸಿದ್ದಾರೆ. 

ಘಟನೆ ಸಂಬಂಧ ಸಂಘಟನೆಗಳ ಮೇಲೆ ನಿಗಾ ಇಡುವಂತೆ ಹಾಗೂ ಒಗ್ಗಟ್ಟಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದರು.



Read more

[wpas_products keywords=”deal of the day”]