Karnataka news paper

ಸರಕಾರಿ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು; ಸರಕಾರ ಆದೇಶ


ಬೆಂಗಳೂರು: ರಾಜ್ಯದ ಸರಕಾರಿ ಶಾಲೆಗಳಲ್ಲಿ ಸರಕಾರ ನಿಗದಿ ಪಡಿಸಿದ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ. ಇನ್ನು ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧಾರ ಮಾಡಿರುವ ಸಮವಸ್ತ್ರವನ್ನೇ ಧರಿಸತಕ್ಕದ್ದು ಎಂದು ಈ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಈ ಆದೇಶವನ್ನು ಹೊರಡಿಸಿದೆ. ಪದವಿ ಪುರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಕಾಲೇಜು ಅಭಿವೃದ್ದಿ ಮಂಡಳಿ ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯು ನಿಗದಿ ಪಡಿಸಿದ ಸಮವಸ್ತ್ರವನ್ನು ಧರಿಸಬೇಕು. ಆಡಳಿತ ಮಂಡಳಿ ಸಮವಸ್ತ್ರ ನಿಗದಿ ಪಡಿಸದೇ ಇದ್ದಲ್ಲಿ, ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Hijab : ಕಾಲೇಜಿನಲ್ಲಿ ಹಿಜಾಬ್ ಬ್ಯಾನ್ : ಕರ್ನಾಟಕ ಹೈಕೋರ್ಟ್‌ನಲ್ಲಿ ಫೆ. 8ಕ್ಕೆ ವಿಚಾರಣೆ

ಇದಕ್ಕೆ ಸಮರ್ಥನೆಯಾಗಿ ಫಾತಿಮಾ ಸೈಯದ್ ಹಾಗೂ ಭಾರತ್ ಎಜುಕೇಷನ್ ಸೊಸೈಟಿ ಪ್ರಕರಣದಲ್ಲಿ ಬಾಂಬೆ ಉಚ್ಛ ನ್ಯಾಯಾಲಯ ಶಿರವಸ್ತ್ರ ಧರಿಸಿ ಶಾಲೆಗೆ ಬರದಂತೆ ನಿರ್ದೇಶಸಿರುವುದು ಸಂವಿಧಾನದ ಅನುಚ್ಛೇದ 2 ರ ಉಲ್ಲಂಘನೆ ಅಲ್ಲವೆಂದು ನೀಡಿರುವ ತೀರ್ಪನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಾಗೂ ಕೇರಳ ಹೈಕೋರ್ಟ್‌ ಆದೇಶವನ್ನು ಉಲ್ಲೇಖ ಮಾಡಲಾಗಿದೆ.

ಹಿಂದೂ ಸಂಸ್ಕೃತಿ ಹಾಳಾಗಬಾರದು, ಎಲೆಕ್ಷನ್ ಟೈಂಗೆ ಸಿದ್ದರಹೀಮ್ಅಯ್ಯ ಆಗಿ ಬರ್ತಾರೆ: ಪ್ರತಾಪ್‌ ಸಿಂಹ ವ್ಯಂಗ್ಯ

ಉಡುಪಿಯಲ್ಲಿ ಆರಂಭವಾದ ಸ್ಕಾರ್ಫ್ ವಿವಾದ ಇದೀಗ ರಾಜ್ಯದ ಹಲವು ಕಡೆಗಳಲ್ಲಿ ತಲೆಎತ್ತುತ್ತಿವೆ. ಸ್ಕಾರ್ಫ್‌ಗೆ ಪರ್ಯಾಯವಾಗಿ ಕೇಸರಿ ಶಾಲುಗಳನ್ನು ವಿದ್ಯಾರ್ಥಿಗಳು ಧರಿಸಿಕೊಂಡು ಬರುತ್ತಿದ್ದಾರೆ. ಈ ತಿಕ್ಕಾಟ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸರಕಾರ ಈ ಆದೇಶವನ್ನು ಹೊರಡಿಸಿದೆ.



Read more

[wpas_products keywords=”deal of the day sale today offer all”]