The New Indian Express
ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ಫೆ.07 ರಂದು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳುತ್ತಿದ್ದು ಇದಕ್ಕೂ ಮುನ್ನ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಫೆ.06 ರಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾವೇರಿ ನಿವಾಸದಲ್ಲಿ ಇರುವ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಸಿಎಂ ಬೊಮ್ಮಾಯಿ-ಯಡಿಯೂರಪ್ಪ ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭದಲ್ಲಿ ಸಚಿವ ಆರ್ ಅಶೋಕ್, ಸಂಸದ ರಾಘವೇಂದ್ರ ಕೂಡ ಚರ್ಚೆಯಲ್ಲಿ ಭಾಗಿಯಾಗಿದ್ದರು. ನಿಗಮ ಮಂಡಳಿಗಳ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಬೆಂಬಲಿಗರು ಹೆಚ್ಚಾಗಿದ್ದಾರೆ.
Read more
[wpas_products keywords=”deal of the day”]