Karnataka news paper

‘ಜೇಮ್ಸ್’ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್: ಟೀಸರ್ ಬಿಡುಗಡೆ ದಿನಾಂಕ ಘೋಷಣೆ


Online Desk

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ (Power star Puneet Rajkumar) ದಿ. ಪುನೀತ್ ರಾಜ್ ಕುಮಾರ್ ಅವರ ಕೊನೆಯ ಅಭಿನಯದ ಜೇಮ್ಸ್ ಚಿತ್ರದ ಟೀಸರ್ ಫೆಬ್ರವರಿ 11ರಂದು ಬಿಡುಗಡೆಯಾಗಲಿದೆ.

ಚಿತ್ರತಂಡ ಮತ್ತು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಫೆ.11ರಂದು ಬೆಳಗ್ಗೆ 11.11ಕ್ಕೆ ಟೀಸರ್ ಬಿಡುಗಡೆಯಾಗಲಿದ್ದು ಪುನೀತ್ ಅಭಿಮಾನಿಗಳಿಗೆ ಖುಷಿಯ ವಿಚಾರವಾಗಿದೆ. 

ಚಿತ್ರ ಮಾರ್ಚ್ 17ರಂದು ಪುನೀತ್ ಹುಟ್ಟುಹಬ್ಬದ ದಿನ ಬಿಡುಗಡೆಯಾಗಲಿದ್ದು ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಪುನೀತ್ ಪಾತ್ರಕ್ಕೆ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.





Read more…

[wpas_products keywords=”party wear dress for women stylish indian”]