Online Desk
ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿರುವ ಟೀಂ ಇಂಡಿಯಾ ಆಟಗಾರರ ಪಟ್ಟಿಯಲ್ಲಿ ಬಿಸಿಸಿಐ ಕೊಂಚ ಬದಲಾವಣೆ ಮಾಡಿದ್ದು, ಇಶಾನ್ ಕಿಶನ್, ಶಾರುಖ್ ಖಾನ್ ರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ.
NEWS – Ishan Kishan and Shahrukh Khan added to squad for 1st ODI.
More details here – https://t.co/lJRVufPI3s #INDvWI pic.twitter.com/I5jqVp3BQf
— BCCI (@BCCI) February 5, 2022
ಈ ಕುರಿತಂತೆ ಬಿಸಿಸಿಐ ಪತ್ರಿಕಾ ಪ್ರಕಟಣೆ ನೀಡಿದ್ದು, ‘ಭಾನುವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯು ಇಶಾನ್ ಕಿಶನ್ ಮತ್ತು ಶಾರುಖ್ ಖಾನ್ ಅವರನ್ನು ಭಾರತ ತಂಡಕ್ಕೆ ಸೇರಿಸಿದೆ ಎಂದು ಹೇಳಿದೆ.
ಈ ಹಿಂದೆ ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಇದೀಗ ಈ ಪಟ್ಟಿಗೆ ಇಶಾನ್ ಕಿಶನ್ ಮತ್ತು ಶಾರುಖ್ ಖಾನ್ ಸೇರ್ಪಡೆಗೊಂಡಿದ್ದಾರೆ.
Read more…
[wpas_products keywords=”deal of the day sports items”]