Karnataka news paper

ಕರಾವಳಿ ಕರ್ನಾಟಕ, ಮಲೆನಾಡಿಗಾಗಿ ಕಾಂಗ್ರೆಸ್’ನಿಂದ ಪ್ರತ್ಯೇಕ ಪ್ರಣಾಳಿಕೆ: ಡಿಕೆ.ಶಿವಕುಮಾರ್


The New Indian Express

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ 14 ತಿಂಗಳುಬಾಕಿ ಇರುವಾಗಲೇ ಪ್ರತಿಪಕ್ಷ ಕಾಂಗ್ರೆಸ್ ತನ್ನ ಪ್ರಣಾಳಿಕೆ ಕೆಲಸವನ್ನು ಆರಂಭಿಸಿದೆ. ಇತರ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಯಲು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರಾವಳಿ ಕರ್ನಾಟಕ ಮತ್ತು ಮಲೆನಾಡಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಹೊರತರುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆಯ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕುರಿತ ಕೆಲಸ ಪ್ರಾರಂಭಿಸುವಂತೆ ಕೆಲವರಿಗೆ ಸೂಚನೆ ನೀಡಲಾಗಿದೆ. ನಮ್ಮ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವತ್ತ ಹೆಚ್ಚಿನ ಗಮನ ಹರಿಸಲಾಗುವುದು. ರಾಜ್ಯದಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳಿದ್ದು, ಇಲ್ಲಿಂದ ಜನರು ಕೆಲಸ ಅರಸಿ ಬೇರೆ ರಾಜ್ಯಗಳಿಗೆ ವಲಸೆ ಹೋಗಬೇಕಾಗಿಲ್ಲ ಎಂದು ಹೇಳಿದರು. 

ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಇತ್ತೀಚೆಗೆ ಗೋವಾಕ್ಕೆ ಭೇಟಿ ನೀಡಿದ್ದಾಗ, ಆ ರಾಜ್ಯಕ್ಕೆ ವಲಸೆ ಬಂದ ಕರ್ನಾಟಕದ ಅನೇಕ ಜನರು ಅವಕಾಶ ಸಿಕ್ಕರೆ ಕರ್ನಾಟಕದಲ್ಲಿಯೇ ಉಳಿದು ಕೆಲಸ ಮಾಡಲು ಬಯಸುತ್ತೇವೆಂದು ತಿಳಿಸಿದರು ಎಂದು ತಿಳಿಸಿದರು.



Read more

[wpas_products keywords=”deal of the day”]