Karnataka news paper

Lata Mangeshkar no more: ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ


ಭಾರತೀಯ ಚಿತ್ರರಂಗದ ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲತಾ ಮಂಗೇಶ್ವರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಇಂದು (ಫೆಬ್ರವರಿ 6) ಗಾಯಕಿ ಲತಾ ಮಂಗೇಶ್ಕರ್ ವಿಧಿವಶರಾಗಿದ್ದಾರೆ. ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು.

ಕೋವಿಡ್-19 ಪಾಸಿಟಿವ್
‘ಗಾನ ಕೋಗಿಲೆ’ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಕೋವಿಡ್ 19 ಹಾಗೂ ನ್ಯೂಮೋನಿಯಾದಿಂದ ಬಳಲುತ್ತಿದ್ದ ಲತಾ ಮಂಗೇಶ್ಕರ್ ಅವರನ್ನು ಕಳೆದ ಜನವರಿ ತಿಂಗಳಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ಜನವರಿ 28 ರಂದು ಅವರನ್ನು ವೆಂಟಿಲೇಟರ್‌ನಿಂದ ಹೊರಗೆ ಕರೆತರಲಾಯಿತು. ಆದರೆ, ಫೆಬ್ರವರಿ 5 ರಂದು ಲತಾ ಮಂಗೇಶ್ಕರ್ ಅವರ ಆರೋಗ್ಯ ಕ್ಷೀಣಿಸಿದ ಪರಿಣಾಮ ಮತ್ತೆ ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಯಿತು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ.

ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿ ಎಂದು ಅವರ ಅಸಂಖ್ಯಾತ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಕೊನೆಗೂ ಪ್ರಾರ್ಥನೆ ಫಲಿಸಲೇ ಇಲ್ಲ. ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಗಣ್ಯರು ಹಾಗೂ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.



Read more

[wpas_products keywords=”deal of the day sale today offer all”]