Karnataka news paper

ರಾಜ್ಯ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಸಿದ್ದರಾಮಯ್ಯರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಸಲಹೆಗಾರ!


ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸಲಹೆಗಾರ ಕೆ.ರಾಜು ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭಾನುವಾರ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಅವರು ಕೆಲ ಹೊತ್ತು ಮಾತುಕತೆಯನ್ನು ನಡೆಸಿದರು. ರಾಜ್ಯದಲ್ಲಿ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ಮುಸುಕಿನ ಗುದ್ದಾಟ ಚರ್ಚೆಗೆ ಗ್ರಾಸವಾಗುತ್ತಿದೆ.

ಸಿದ್ದರಾಮಯ್ಯ ಆಪ್ತರ ವಿರುದ್ಧ ನೋಟಿಸ್‌ ಮೇಲೆ ನೋಟಿಸ್‌ ಕೊಡುತ್ತಿರುವುದು ಕುಡಾ ಚರ್ಚೆಯನ್ನು ಹುಟ್ಟುಹಾಕಿದೆ. ಈ ನಡುವೆ ಸಿದ್ದರಾಮಯ್ಯ ಮೂರು ದಿನಗಳ ಕಾಲ ಕಬಿನಿ ರೆಸಾರ್ಟ್‌ನಲ್ಲಿ ವಿಶಾಂತ್ರಿ ಪಡೆದಿದ್ದಾರೆ. ವಿಶ್ರಾಂತಿಯ ಸಂದರ್ಭದಲ್ಲಿ ತಮ್ಮ ಆಪ್ತರ ಜೊತೆಗೆ ರಾಜಕೀಯ ಮಾತುಕತೆಗಳನ್ನು ನಡೆಸಿದ್ದಾರೆ.

ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸುವ ಸಂದರ್ಭದಲ್ಲಿ ಅಶೋಕ್ ಪಟ್ಟಣ್‌ ಅವರು ಡಿಕೆ ಶಿವಕುಮಾರ್ ಅವರ ಬಗ್ಗೆ ಅಸಮಾಧಾನ ತೋಡಿಕೊಂಡಿದ್ದರು. ಈ ವಿಡಿಯೋ ಮಾಧ್ಯಮಗಳಲ್ಲಿ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ನೀಡಲಾಗಿತ್ತು.

ಸಂಪುಟ ಸರ್ಕಸ್: ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸಕ್ಕೂ ಮುನ್ನವೇ ಆಕಾಂಕ್ಷಿಗಳಿಂದ ತೀವ್ರ ಲಾಬಿ

ಮತ್ತೊಂದು ಕಡೆಯಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ನಾಲ್ಕು ತಿಂಗಳು ಬಾಕಿ ಇರುವ ಹೊತ್ತಲ್ಲೇ ಟಿಕೆಟ್‌ ಚರ್ಚೆ ಶುರುವಾಗಿದೆ. ತಮ್ಮ ಆಪ್ತರಿಗೆ ಟಿಕೆಟ್‌ ನೀಡಲು ಡಿಕೆಶಿ ತಯಾರು ನಡೆಸುತ್ತಿದ್ದರೆ ಹಾಲಿ ಶಾಸಕರನ್ನು ಬದಲಾವಣೆ ಮಾಡದಂತೆ ಹಾಗೂ ತಮ್ಮ ಆಪ್ತರಿಗೆ ಟಿಕೆಟ್ ಸಿಗುವಂತೆ ಸಿದ್ದರಾಮಯ್ಯ ತಯಾರಿ ನಡೆಸುತ್ತಿದ್ದಾರೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವುದರಿಂದ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ.

ಈ ಎಲ್ಲಾ ಹಿನ್ನೆಲೆಯಲ್ಲಿ ಹೈಕಮಾಂಡ್‌ ಮಟ್ಟದಲ್ಲೂ ಚರ್ಚೆ ನಡೆಯುತ್ತಿದೆ. ಈ ಬೆಳವಣಿಗೆಗಳ ನಡುವೆ ರಾಹುಲ್ ಗಾಂಧಿ ಸಲಹೆಗಾರ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಕೂಡಾ ಉಪಸ್ಥಿತರಿದ್ದರು.



Read more

[wpas_products keywords=”deal of the day sale today offer all”]