Karnataka news paper

ಭಾರತದಲ್ಲಿ ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗ!


ಟೆಕ್ನೋ ಪೋವಾ 5G

ಹೌದು, ಟೆಕ್ನೋ ಕಂಪೆನಿ ಭಾರತದಲ್ಲಿ ಹೊಸ ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಈಗಾಗಲೇ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಇದು 6.95 ಇಂಚಿನ HD+ ಡಿಸ್‌ಪ್ಲೇ ಹೊಂದಿರಲಿದೆ. ಈ ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿರಲಿದೆ. ಜೊತೆಗೆ 6,000mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ 1,080×2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.95 ಇಂಚಿನ HD+ ಡಿಸ್‌ಪ್ಲೇ ಹೊಂದಿರಲಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ ಅನುಪಾತ 83.7% ಹೊಂದಿದೆ. ಜೊತೆಗೆ 389PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 11GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೂ ಅವಕಾಶವಿದೆ.

ಕ್ಯಾಮೆರಾ ಸೆಟಪ್‌

ಕ್ಯಾಮೆರಾ ಸೆಟಪ್‌

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು AI ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇದು ಡ್ಯುಯಲ್-LED ಫ್ಲ್ಯಾಷ್ ಅನ್ನು ಪ್ಯಾಕ್ ಮಾಡುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಅಧಿಕೃತ ಟೆಕ್ನೋ ಮೊಬೈಲ್ ಇಂಡಿಯಾ ಟ್ವಿಟರ್ ಖಾತೆಯು ದೇಶದಲ್ಲಿ ಟೆಕ್ನೋ ಪೊವಾ 5ಜಿ ಬಿಡುಗಡೆ ದಿನಾಂಕವನ್ನು ಫೆಬ್ರವರಿ 8ಕ್ಕೆ ನಿಗಧಿಪಡಿಸಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಅಂದಾಜು 23,100ರೂ ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ ಡಜಲ್‌ ಬ್ಲಾಕ್‌, ಪೋಲಾರ್‌ ಸಿಲ್ವರ್‌ ಮತ್ತು ಪವರ್‌ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರುವ ಸಾದ್ಯತೆ ಇದೆ.



Read more…

[wpas_products keywords=”smartphones under 15000 6gb ram”]