Karnataka news paper

‘ಪದ್ಮಭೂಷಣ’ ಎಫೆಕ್ಟ್: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಗುಲಾಂ ನಬಿ ಆಜಾದ್ ಔಟ್; ಮನೀಶ್ ತಿವಾರಿಗೂ ಕೊಕ್!


The New Indian Express

ನವದೆಹಲಿ: ಫೆಬ್ರವರಿ 20 ರಂದು ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರನ್ನು ಹೊರಗಿಡಲಾಗಿದೆ.

ನರೇಂದ್ರ ಮೋದಿ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿಗೆ ಭಾಜನವಾಗುವ ಮೊದಲು ಬಿಡುಗಡೆಯಾದ ಯುಪಿ ಮೊದಲ ಹಂತದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಗುಲಾಂ ನಬಿ ಆಜಾದ್ ಅವರ ಹೆಸರಿತ್ತು. ಮನೀಶ್ ತಿವಾರಿ ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರದ ವೈಖರಿಯನ್ನು  ಟೀಕಿಸಿದ್ದರು.

ಆಜಾದ್ ಮತ್ತು ತಿವಾರಿ ಅವರು ಜಿ -23 ರ ಪ್ರಮುಖ ಸದಸ್ಯರಾಗಿದ್ದಾರೆ, ಅವರು ಪಕ್ಷದ ನಾಯಕತ್ವದ ವಿಚಾರವಾಗಿ ಈ ಹಿಂದೆ ಪತ್ರ ಬರೆದು ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದರು. ಆದಾಗ್ಯೂ, G-23 ನ ಇತರ ಕೆಲವು ಸದಸ್ಯರಾದ ಆನಂದ್ ಶರ್ಮಾ ಮತ್ತು ಭೂಪಿಂದರ್ ಸಿಂಗ್ ಹೂಡಾ ಪಂಜಾಬ್‌ನ ಸ್ಟಾರ್ ಪ್ರಚಾರಕರ ಭಾಗವಾಗಿದ್ದಾರೆ.

ಪಂಜಾಬ್‌ಗೆ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಮತ್ತು ರಾಹುಲ್ ಗಾಂಧಿ ಸೇರಿದಂತೆ 30 ‘ಸ್ಟಾರ್ ಪ್ರಚಾರಕರ’ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಈ ಹಿಂದೆ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿದ್ದ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನೂ ಪಕ್ಷ ಸೇರಿಸಿಕೊಂಡಿದೆ. ಈ ಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ಹರೀಶ್ ಚೌಧರಿ, ಪಿಸಿಸಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಅಂಬಿಕಾ ಸೋನಿ ಮತ್ತು ಮಾಜಿ ಸ್ಪೀಕರ್ ಮೀರಾ ಕುಮಾರ್ ಕೂಡ ಇದ್ದಾರೆ.

ಇದನ್ನೂ ಓದಿ: ಗೋವಾದಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ: ಶಿವಸೇನಾ ನಾಯಕ ಸಂಜಯ್ ರಾವತ್

ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್ ಮತ್ತು ಭೂಪೇಶ್ ಬಾಘೇಲ್, ಮಾಜಿ ಪಿಸಿಸಿ ಮುಖ್ಯಸ್ಥರಾದ ಸುನಿಲ್ ಜಾಖರ್, ಪರತಾಪ್ ಸಿಂಗ್ ಬಾಜ್ವಾ, ಅಜಯ್ ಮಾಕನ್ ಮತ್ತು ರಣದೀಪ್ ಸುರ್ಜೆವಾಲಾ ಅವರು ಸ್ಟಾರ್ ಪ್ರಚಾರಕರಲ್ಲಿ ಸೇರಿದ್ದಾರೆ.

ಹರಿಯಾಣ ಕಾಂಗ್ರೆಸ್ ಮುಖ್ಯಸ್ಥೆ ಕುಮಾರಿ ಸೆಲ್ಜಾ, ರಾಜೀವ್ ಶುಕ್ಲಾ, ರಂಜೀತ್ ರಂಜನ್, ನೆಟ್ಟಾ ಡಿಸೋಜಾ, ಬಿವಿ ಶ್ರೀನಿವಾಸ್, ಇಮ್ರಾನ್ ಪ್ರತಾಪ್‌ಗರ್ಹಿ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಅಮೃತಾ ಧವನ್, ರಮೀಂದರ್ ಅವ್ಲಾ ಮತ್ತು ತಜೇಂದರ್ ಸಿಂಗ್ ಬಿಟ್ಟೂ ಸಹ 30 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹೆಸರಿಸಿದ್ದಾರೆ.



Read more

[wpas_products keywords=”deal of the day”]