The New Indian Express
ಬೆಂಗಳೂರು: ಕರ್ನಾಟಕದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ.
ಈ ಕುರಿತು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಮಾಹಿತಿ ನೀಡಿ, ಅಯೋಧ್ಯೆಯಲ್ಲಿ ಕರ್ನಾಟಕ ರಾಜ್ಯದ ಛತ್ರವನ್ನು ನಿರ್ಮಿಸಬೇಕು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಪತ್ರ ವ್ಯವಹಾರ ನಡೆಸಲಾಗಿದೆ. ಅಧಿವೇಶನ ಮುಗಿದ ನಂತರ ಆಯೋಧ್ಯೆಗೆ ಭೇಟಿ ನೀಡಿ ಅಲ್ಲಿನ ಪ್ರಮುಖ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಆಂಧ್ರಪ್ರದೇಶದ ಶ್ರೀಶೈಲವನ್ನು ಉಲ್ಲೇಖಿಸಿ, ಕರ್ನಾಟಕ ರಾಜ್ಯದಿಂದ ಬಹುಸಂಖ್ಯೆಯಲ್ಲಿ ಭಕ್ತರು ತೆರಳುವ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮುಜರಾಯಿ ಇಲಾಖೆ ಒಡೆತನದಲ್ಲಿರುವ ಭೂಮಿಯಲ್ಲಿ ಕರ್ನಾಟಕ ಛತ್ರ ನಿರ್ಮಿಸಲು 85 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. 45 ಕೋಟಿ ರೂಪಾಯಿ ವೆಚ್ಚದಲ್ಲಿ ಮೊದಲ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳ ತಿಳಿಸಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಶೀಘ್ರದಲ್ಲೇ ರಾಜ್ಯದ ಪ್ರಮುಖ ದೇವಸ್ಥಾನಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ
ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ದೇವಾಲಯಗಳ ಅಭಿವೃದ್ದಿಗೆ 168 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನೀಡಿದ್ದು, ಒಟ್ಟಾರೆಯಾಗಿ ಪ್ರಸಕ್ತ ವರ್ಷ ಇದುವರೆಗೂ 287 ಕೋಟಿ ಅನುದಾನ ನೀಡಲಾಗಿದೆ. ಪ್ರತಿವರ್ಷ ಬಜೆಟ್ನಲ್ಲಿ 60 ರಿಂದ 70 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಲಾಗುತ್ತಿತ್ತು, ಬಿಜೆಪಿ ಸರಕಾರ ನಾಲ್ಕು ಪಟ್ಟು ಹೆಚ್ಚು ಅನುದಾನ ನೀಡಿರುವ ಹಿನ್ನಲೆಯಲ್ಲಿ ಮುಜರಾಯಿ ಖಾತೆ ಸಚಿವೆಯಾಗಿ ನಾನು ಮುಖ್ಯಮಂತ್ರಿಗಳಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ರಾಜ್ಯದ ದೇವಸ್ಥಾನಗಳ ವ್ಯಾಪ್ತಿಯಲ್ಲಿರುವ ಜಮೀನುಗಳ ಸರ್ವೇ ಕಾರ್ಯಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಕಂದಾಯ ಸಚಿವರಾದ ಅಶೋಕ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಡ್ರೋನ್ ಸರ್ವೇ ಕಾರ್ಯದಲ್ಲಿ ದೇವಾಲಯಗಳ ಹಾಗೂ ವಕ್ಫ್ ಜಮೀನಿನ ಸಮೀಕ್ಷೆಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
ಪ್ರಧಾನಿ ಮೋದಿಯವರು ಕಾಶಿಯನ್ನು ಅಭಿವೃದ್ದಿಗೊಳಿಸಿದಂತೆ ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ 25 ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಯೋಜನೆಯನ್ನು ರೂಪಿಸಲಾಗಿದೆ. ಮೊದಲ ಹಂತದಲ್ಲಿ 25 ದೇವಸ್ಥಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ದೇವಸ್ಥಾನದ ಮೂಲಭೂತ ಸೌಕರ್ಯ, ಒಣ ಮತ್ತು ಹಸಿ ತ್ಯಾಜ್ಯ ನಿರ್ವಹಣೆ ಸೇರಿದಂತೆ ಸರ್ವತೋಮುಖ ಅಭಿವೃದ್ದಿಗೊಳಿಸುವ ಯೋಜನೆ ಇದಾಗಿದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರಿಗೆ ಯಾವುದೇ ತೊಂದರೆ ಅಗದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಬೇಕು. ದೇವಸ್ಥಾನಕ್ಕೆ ಅವರು ನೀಡುವ ಕಾಣಿಕೆಗಳು ಪಾರದರ್ಶಕತೆಯಿಂದ ಸದುಪಯೋಗ ಆಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನು ಅಭಿವೃದ್ದಿಗೊಳಿಸುವುದು ನನ್ನ ಮಹತ್ವದ ಕನಸಾಗಿದ್ದು, ಈ ಯೋಜನೆಯ ಮೊದಲ ಹಂತದ ಅಂದಾಜು ವೆಚ್ಚ ರೂ. 1140 ಕೋಟಿ ರೂಪಾಯಿಗಳಾಗಿವೆ ಎಂದು ಮಾಹಿತಿ ನೀಡಿದರು.
Read more
[wpas_products keywords=”deal of the day”]