PTI
ಲಖೀಂಪುರ ಖೇರಿ: ಕೆಲ ತಿಂಗಳುಗಳ ಹಿಂದೆ ನಡೆದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಾವನ್ನಪ್ಪಿದ ರೈತನ ಮಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಅಜಯ್ ಮಿಶ್ರಾ ವಿರುದ್ಧ ಕಣಕ್ಕಿಳಿಯುವುದಾಗಿ ಸಂತ್ರಸ್ತ ರೈತ ನಚ್ಚತರ್ ಸಿಂಗ್ ಅವರ ಹಿರಿಯ ಮಗ ಜಗದೀಪ್ ಸಿಂಗ್ ಹೇಳಿದ್ದಾರೆ.
ಸದ್ಯ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳು ನೀಡಿದ್ದ ಆಫರ್‌ಗಳನ್ನು ನಿರಾಕರಿಸಿದ್ದೇನೆ. ಬದಲಿಗೆ ಲೋಕಸಭೆ ಚುನಾವಣೆಯಲ್ಲಿ ತಮ್ಮನ್ನು ಕಣಕ್ಕಿಳಿಸುವಂತೆ ಕೇಳಿಕೊಂಡಿದ್ದೇನೆ ಎಂದು ಅವರು ಹೇಳಿದರು.
ಕಳೆದ ವರ್ಷ ಅಕ್ಟೋಬರ್ 3 ರಂದು ನಡೆದ ಘಟನೆಯಲ್ಲಿ ವಿಶೇಷ ತನಿಖಾ (ಎಸ್‌ಐಟಿ) ಸಲ್ಲಿಸಿದ ಆರೋಪಪಟ್ಟಿಯಲ್ಲಿ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಪ್ರಮುಖ ಆರೋಪಿ ಎಂದು ಘೋಷಿಸಲಾಗಿದ್ದು ಪ್ರಕರಣ ಸಂಬಂಧ ಆಶಿಸ್ ಮಿಶ್ರಾ ಸದ್ಯ ಜೈಲುವಾಸ ಅನುಭವಿಸುತ್ತಿದ್ದಾರೆ.
ದೇಶವನ್ನೇ ಬೆಚ್ಚಿ ಬೀಳಿಸಿದ ಈ ಘಟನೆಯಲ್ಲಿ ನಛತಾರ್ ಸಿಂಗ್ ಸೇರಿದಂತೆ ನಾಲ್ವರು ರೈತರು ಸಚಿವರಿದ್ದ ಕಾರು ಸೇರಿದಂತೆ ಬೆಂಗಾವಲು ವಾಹನದ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದರು.
Read more
[wpas_products keywords=”deal of the day”]