Karnataka news paper

ರಾಜ್ಯ ಕಾಂಗ್ರೆಸ್ ಶೀತಲ ಸಮರದ ಬಿಸಿ ಈಗ ದಿಲ್ಲಿ ನಾಯಕರಿಗೂ ತಟ್ಟಿದೆ! ಬಿಜೆಪಿ ಲೇವಡಿ


ಬೆಂಗಳೂರು: ರಾಜ್ಯ ಕಾಂಗ್ರೆಸ್ ಶೀತಲ ಸಮರದ ಬಿಸಿ ಈಗ ದಿಲ್ಲಿ ನಾಯಕರಿಗೂ ತಟ್ಟಿದೆ! ಎಂದು ಬಿಜೆಪಿ ಲೇವಡಿ ಮಾಡಿದೆ. ರಾಹುಲ್ ಗಾಂಧಿ ಅವರ ಸಲಹೆಗಾರ ಭಾನುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಹಿನ್ನೆಲೆಯಲ್ಲಿ ಟ್ವಿಟ್ಟರ್‌ನಲ್ಲಿ ಬಿಜೆಪಿ ಈ ರೀತಿಯಾಗಿ ಟಾಂಗ್ ನೀಡಿದೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ತೇಪೆ ಹಚ್ಚಲು ರಾಹುಲ್ ಗಾಂಧಿ ಅವರು ತಮ್ಮ ಆಪ್ತ ಸಲಹೆಗಾರರನ್ನೇ ಸಿದ್ದರಾಮಯ್ಯ ನಿವಾಸಕ್ಕೆ ಕಳುಹಿಸಿದ್ದಾರೆ ಎಂದು ಬಿಜೆಪಿ ವ್ಯಾಖ್ಯಾನ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ತೀವ್ರ “ನಿಗಾ” ಘಟಕ ಸೇರುವಂತಾಗಿದೆಯೇ?

ರಾಜ್ಯ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಸಿದ್ದರಾಮಯ್ಯರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಸಲಹೆಗಾರ!

ಪಂಜಾಬ್‌ನಲ್ಲಿ ಚುನಾವಣೆಗೆ ದಿನಗಣನೆ ಆರಂಭವಾದರೂ ಬಂಡಾಯ ಶಮನವಾಗಿಲ್ಲ. ಅಲ್ಲಿ ಸಿಧು, ಇಲ್ಲಿ ಸಿದ್ದು !! ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸುವುದಕ್ಕೆ ಇವರಿಬ್ಬರೇ ಸಾಕು ಎಂದು ಕಾಳೆಲೆದಿದೆ.

ಕಾಂಗ್ರೆಸ್ ಪಕ್ಷಕ್ಕೆ ಪಂಚರಾಜ್ಯಗಳ ಚುನಾವಣೆ ಬಗ್ಗೆ ತಲೆಕೆಡಿಸಿಕೊಳ್ಳಬೇಕೋ ಇಲ್ಲ ಸಿಧು, ಸಿದ್ದರಾಮಯ್ಯ ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕೋ ಎಂಬುದು ತಿಳಿಯದಾಗಿದೆ. ಇವರಿಬ್ಬರ ಜಗಳದಿಂದ ರಾಹುಲ್ ಗಾಂಧಿ ಅವರು ಬೇಸತ್ತು ಹೋಗಿದ್ದಾರೆ. ಪರಿಹಾರಕ್ಕಾಗಿ ಮತ್ತೊಂದು ವಿದೇಶ ಪ್ರವಾಸ ಮಾಡುವುದು ಖಚಿತವಾಗಿದೆ ಎಂದಿದೆ ಬಿಜೆಪಿ.

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸಲಹೆಗಾರ ಕೆ.ರಾಜು ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭಾನುವಾರ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಅವರು ಕೆಲ ಹೊತ್ತು ಮಾತುಕತೆಯನ್ನು ನಡೆಸಿದರು. ರಾಜ್ಯದಲ್ಲಿ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ಮುಸುಕಿನ ಗುದ್ದಾಟ ಚರ್ಚೆಗೆ ಗ್ರಾಸವಾಗುತ್ತಿದೆ.

ಸಿದ್ದರಾಮಯ್ಯ ಆಪ್ತರ ವಿರುದ್ಧ ನೋಟಿಸ್‌ ಮೇಲೆ ನೋಟಿಸ್‌ ಕೊಡುತ್ತಿರುವುದು ಕುಡಾ ಚರ್ಚೆಯನ್ನು ಹುಟ್ಟುಹಾಕಿದೆ. ಈ ನಡುವೆ ಸಿದ್ದರಾಮಯ್ಯ ಮೂರು ದಿನಗಳ ಕಾಲ ಕಬಿನಿ ರೆಸಾರ್ಟ್‌ನಲ್ಲಿ ವಿಶಾಂತ್ರಿ ಪಡೆದಿದ್ದಾರೆ. ವಿಶ್ರಾಂತಿಯ ಸಂದರ್ಭದಲ್ಲಿ ತಮ್ಮ ಆಪ್ತರ ಜೊತೆಗೆ ರಾಜಕೀಯ ಮಾತುಕತೆಗಳನ್ನು ನಡೆಸಿದ್ದಾರೆ.

ಸಿದ್ದರಾಮಯ್ಯಗೆ ನೋಟಿಸ್ ಕಳಿಸುತ್ತೀರಾ?

ಒಂದೆಡೆ ಅಧ್ಯಕ್ಷರು ಹಿಜಾಬ್ ಬಗ್ಗೆ ಪಕ್ಷದವರಿಗೆ ಎಲ್ಲಿಯೂ ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಅಧ್ಯಕ್ಷರ ಮಾತನ್ನು ದಿಕ್ಕರಿಸಿ ಹಿಜಾಬ್ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ಮಾನ್ಯ ಕೆಪಿಸಿಸಿ ಅಧ್ಯಕ್ಷರೇ, ಮುಂದಿನ ನೋಟಿಸ್ ಸಿದ್ದರಾಮಯ್ಯ ಹೆಸರಿಗೆ ಕಳುಹಿಸುತ್ತೀರಾ? ಎಂದು ಬಿಜೆಪಿ ವ್ಯಂಗ್ಯವಾಗಿ ಟೀಕಿಸಿದೆ.



Read more

[wpas_products keywords=”deal of the day sale today offer all”]