Karnataka news paper

ಕೋಲಾರ: ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪಗೆ ಮುಂದುವರಿದ ಚಿಕಿತ್ಸೆ


ಕೋಲಾರ: ಅನಾರೋಗ್ಯದ ಕಾರಣ ಇಲ್ಲಿನ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

97 ವರ್ಷ ವಯಸ್ಸಿನ ಜಾಲಪ್ಪ ಅವರು ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಡಯಾಲಿಸಿಸ್‌ ಮಾಡಲಾಗಿದೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ತಜ್ಞ ವೈದ್ಯರ ತಂಡವು ಚಿಕಿತ್ಸೆ ನೀಡುತ್ತಿದೆ ಎಂದು ಜಾಲಪ್ಪ ಆಸ್ಪತ್ರೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಫೆಬ್ರುವರಿ ತಿಂಗಳಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದ ಜಾಲಪ್ಪ ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ನಂತರ ಅವರು ಚೇತರಿಸಿಕೊಂಡಿದ್ದರು.

ಇದನ್ನೂ ಓದಿ: 



Read more from source