Online Desk
ಬೆಂಗಳೂರು: ಕಾಡು ಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ಮೀಸಲಾತಿ ಸೌಲಭ್ಯ ಕಲ್ಪಿಸುವ ಪ್ರಕ್ರಿಯೆಯನ್ನು ತೀವ್ರಗೊಳಿಸುತ್ತಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಸಾ ಅವರೊಂದಿಗೆ ಚರ್ಚಿಸಿ ಎಸ್ ಟಿ ಮೀಸಲಾತಿ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ವಿ. ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಇಂದು ರಾಜ್ಯ ಕಾಡುಗೊಲ್ಲ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಡುಗೊಲ್ಲರ ಜೀವನಶೈಲಿ ಸಾಕ್ಷ್ಯವನ್ನು ಬಿಡುಗಡೆ ಮಾತನಾಡಿದ ನಾರಾಯಣಸ್ವಾಮಿ, ಕಾಡುಗೊಲ್ಲ ಸಮುದಾಯಕ್ಕೆ ಸೂಕ್ತ ರೀತಿಯಲ್ಲಿ ಪರಿಶಿಷ್ಟ ಪಂಗಡದ ಸ್ಥಾನಮಾನ, ಸೌಲಭ್ಯ ಕಲ್ಪಿಸುವ ಸಲುವಾಗಿ ಕೇಂದ್ರದ ಮೇಲೆ ಒತ್ತಡ ತರಲಾಗುವುದು ಎಂದರು.
ಕಾಡುಗೊಲ್ಲರ ನೋವಿನ ಜೀವನ ಪದ್ದತಿ ಮತ್ತು ಜೀವನ ಶೈಲಿ, ನೂರಾರು ವರ್ಷದ ಇತಿಹಾಸವನ್ನು ಎಲ್ಲರಿಗೂ ತಿಳಿಸಬೇಕಾಗಿದೆ. ಇವರ ಸಂಸ್ಕೃತಿಯಲ್ಲಿ ಸಿರಿತನವಿದೆ. 1807ರಲ್ಲಿಯೇ ಬುಕನ್ ಸಮಿತಿ ಅವರನ್ನು ಬುಡಕಟ್ಟು ಜನಾಂಗ ಎಂದು ವರದಿ ನೀಡಿದೆ. ಆದರೆ, ರಾಜಕೀಯ ತೀರ್ಮಾನ ಮಾಡಲು ಸಾಧ್ಯವಾಗಿಲ್ಲ, ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯ ಈ ಸಮಾಜದ ಇತಿಹಾಸವನ್ನು ಸಂಗ್ರಹಿಸಿದೆ. ಈ ಕುರಿತಾದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು, ಕಾಡುಗೊಲ್ಲರು ವಾಸಿಸುವ ಪ್ರದೇಶವನ್ನು ಕಂದಾಯ ಗ್ರಾಮಗಳಾಗಿ ಮಾಡಿ ಹಕ್ಕುಪತ್ರ ನೀಡಬೇಕು ಎಂದರು.
Read more
[wpas_products keywords=”deal of the day”]