Online Desk
ನವದೆಹಲಿ: ದಿವಂಗತ ಲತಾ ಮಂಗೇಶ್ಕರ್ ಅವರ ಗೌರವಾರ್ಥ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರರು ಕಪ್ಪು ಪಟ್ಟಿ ಕಣಕ್ಕಿಳಿಯಲಿದ್ದಾರೆ.
The Indian Cricket Team is wearing black armbands today to pay their respects to Bharat Ratna Lata Mangeshkar ji who left for her heavenly abode on Sunday morning. The queen of melody, Lata didi loved cricket, always supported the game and backed Team India. pic.twitter.com/NRTyeKZUDc
— BCCI (@BCCI) February 6, 2022
ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಮೊದಲ ಏಕದಿನ ಪಂದ್ಯ ನಡೆಯುತ್ತಿದ್ದು, ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲಿದ್ದಾರೆ. ಲತಾ ಮಂಗೇಶ್ಕರ್ ಅವರ ನೆನಪಿನಾರ್ಥವಾಗಿ ಆಟಗಾರರು ಈ ಕ್ರಮ ಅನುಸರಿಸುತ್ತಿದ್ದಾರೆ.
ಭಾರತ ರತ್ನ ಲತಾ ಮಂಗೇಶ್ಕರ್ (Lata Mangeshkar) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬೆಳಗ್ಗೆ 8.12ರ ಸುಮಾರಿಗೆ ಲತಾ ನಮ್ಮನ್ನಗಲಿದ್ದಾರೆ ಎಂದು ಅವರ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಲತಾಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ಸುಮಾರು 12.30 ರ ವೇಳೆಗೆ ಅವರ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಇಂದು ಸಂಜೆ 6.30ಕ್ಕೆ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಲತಾಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ಸುಮಾರು 12.30 ರ ವೇಳೆಗೆ ಅವರ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಇಂದು ಸಂಜೆ 6.30ಕ್ಕೆ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
Read more…
[wpas_products keywords=”deal of the day sports items”]