ಈ ಸಂದರ್ಭದಲ್ಲಿ ನಾಯಕ ಶಶಿಕಾಂತ್ ಮಾತನಾಡಿ “ನನ್ನದು 2 ಶೇಡ್ ಇರುವ ಪಾತ್ರ, ಡಿಲೇರಿಯಂ ಫೋಬಿಯಾ ಎನ್ನುವ ಖಾಲೆಯ ಮೇಲೆ ಮಾಡಿರುವ ಚಿತ್ರವಿದು, ನಾವು ಈ ಕಥೆ ಮಾಡಿಕೊಂಡು ನಿರ್ಮಾಪಕರ ಬಳಿ ಹೋದಾಗ ಮೊದಲು ಒಪ್ಪಲಿಲ್ಲ, ನಂತರ ನಮ್ಮ ಹಿಂದಿನ ಚಿತ್ರಕ್ಕೆ ಪತ್ರಿಕೆಗಳಲ್ಲಿ ಪ್ರಕಟವಾದ ವಿಮರ್ಶೆಗಳನ್ನು ತಂದು ತೋರಿಸಿದಾಗ ಒಪ್ಪಿದರು. ಮಾದ್ಯಮಗಳ ಕಾರಣದಿಂದ ದೊಡ್ಡ ಚಿತ್ರವೊಂದು ಆರಂಭವಾಯಿತು, ನಿರ್ಮಾಪಕರು ಒಂದೊಳ್ಳೇ ಸಿನಿಮಾ ಮಾಡಿಕೊಡಿ ಎಂದು ಹೇಳಿ ಎಲ್ಲಾ ಜವಾಬ್ದಾರಿ ನಮಗೇ ವಹಿಸಿದ್ದರು. ಕಥೆ ಬರೆಯುವಾಗ ಈ ಪಾತ್ರಕ್ಕೆ ವೈಷ್ಣವಿಗೌಡ ಅವರೇ ಸೂಕ್ತ ಅಂದುಕೊಂಡಿದ್ದೆವು, ಅವರ ಬಳಿ ಹೋಗಿ ಕಥೆ ಹೇಳಿದಾಗ ಅವರೂ ಸಹ ಒಪ್ಪಿದರು. ಚಿತ್ರಕ್ಕೆ 70 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ, ವೈಷ್ಣವಿಗೌಡ ಅವರು ಸಿಂಗಲ್ ಶಾಟ್‌ನಲ್ಲಿ ಅದ್ಭುತವಾಗಿ ಅಭಿನಯ ನೀಡಿದ್ದಾರೆ” ಎಂದರು.
‘ಬಹುಕೃತ ವೇಷಂ’ ಸಿನಿಮಾದಲ್ಲಿ ‘ಅಗ್ನಿಸಾಕ್ಷಿ’ ವೈಷ್ಣವಿ ಗೌಡ
ನಟಿ ವೈಷ್ಣವಿ ಗೌಡ ಮಾತನಾಡಿ, “ನಾವೆಲ್ಲವರೂ ಗೊತ್ತೋ ಗೊತ್ತಿಲ್ಲದೆ ಒಂದು ವೇಷ ಹಾಕಿರುತ್ತೇವೆ. ಅಂತೆಯೇ ಈ ಸಿನಿಮಾದಲ್ಲಿಯೂ ಕೆಲ ವೇಷಗಳಿವೆ. ಈ ಸಿನಿಮಾ ಕಥೆ ಅದ್ಭುತವಾಗಿದೆ. ನನಗೆ ಈ ಸಿನಿಮಾ ಮಾಡಿ ಖುಷಿಯಾಗಿದೆ” ಎಂದು ಹೇಳಿದ್ದಾರೆ.
ಚಿತ್ರದ ಕಥೆ, ಚಿತ್ರಕಥೆ ಬರೆದಿರುವ ಅಧ್ಯಾಯ ತೇಜ್ ಮಾತನಾಡಿ “ನನ್ನ ಸ್ನೇಹಿತನೊಬ್ಬನಿಗೆ ಈ ಥರದ ಖಾಯಿಲೆ ಇತ್ತು. ಪ್ರತಿದಿನ ಅವನ ಮೇಲೆ ಅವನೇ ಫೈಟ್ ಮಾಡ್ತಿರ್ತಾನೆ. ಇದನ್ನು ಸ್ನೇಹಿತ ಶಶಿಕಾಂತ್ ಬಳಿ ಹೇಳಿದೆ. ಆತನೂ ಸಿನಿಮಾ ಮಾಡಲು ಒಪ್ಪಿದ, ಕಂಟೆಂಟ್ ಸಿನಿಮಾವನ್ನು ಕಮರ್ಷಿಯಲ್ಲಾಾಗಿ ಮಾಡಿದ್ದೇವೆ” ಎಂದು ಹೇಳಿದರು.
Photos: ಬಹುದಿನಗಳ ನಂತರ ಒಟ್ಟಿಗೆ ಕಾಣಿಸಿಕೊಂಡ ನಟಿ ಅಮೂಲ್ಯ, ವೈಷ್ಣವಿ ಗೌಡ
ಚಿತ್ರದ ಪ್ರೀ ಕ್ಲೈಮ್ಯಾಕ್ಸನಲ್ಲಿ ನಾಲ್ಕುವರೆ ನಿಮಿಷದ ಒಂದೇ ಶಾಟ್ ಇದೆ. ಅದರಲ್ಲಿ ವೈಷ್ಣವಿಗೌಡ ಅವರು ನಗು, ಅಳು ಸೇರಿಸಿ ಪೈಪೋಟಿಗೆ ಬಿದ್ದವರಂತೆ ಅಭಿನಯಿಸಿದ್ದಾರೆ. ಎಚ್. ನಂದ ಹಾಗೂ ಡಿ. ಕೆ. ರವಿ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವೈಶಾಖ್ ವಿ.ಭಾರ್ಗವ್ ಈ ಚಿತ್ರದ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದರೆ, ಕಿರಣ್ ಕೃಷ್ಣಮೂರ್ತಿ ಅವರು ಚಿತ್ರಕ್ಕೆ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಛಾಯಾಗ್ರಾಹಕ ಹರ್ಷಕುಮಾರ್‌ಗೌಡ ಪ್ರತಿ ದೃಶ್ಯವನ್ನು ಕುತೂಹಲಕರವಾಗಿ ಸೆರೆಹಿಡಿದಿದ್ದಾರೆ. ಜ್ಞಾನೇಶ್ ಬಿ. ಚಿತ್ರದ ಸಂಕಲನ ಮಾಡಿದ್ದಾರೆ.
‘ಬಹುಕೃತ ವೇಷಂ’ ಹಾಕಿದ ಬಿಗ್ ಬಾಸ್, ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಗೌಡ
Read more
[wpas_products keywords=”deal of the day party wear dress for women stylish indian”]