Online Desk
ನವದೆಹಲಿ: ಇಂಗ್ಲೆಂಡ್ ತಂಡವನ್ನು ಮಣಿಸಿ 5ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆ ಮುತ್ತಿಟ್ಟ ಭಾರತ ಕಿರಿಯರ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
Extremely proud of our young cricketers. Congratulations to the Indian team for winning the ICC U19 World Cup. They have shown great fortitude through the tournament. Their stellar performance at the highest level shows that the future of Indian cricket is in safe and able hands.
— Narendra Modi (@narendramodi) February 6, 2022
19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ನಮ್ಮ ಯುವ ಕ್ರಿಕೆಟಿಗರ ಬಗ್ಗೆ ಅಪಾರ ಹೆಮ್ಮೆ ಇದೆ. ಐಸಿಸಿ ಅಂಡರ್ –19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ಉತ್ತಮ ಪ್ರದರ್ಶನ ತೋರುವ ಮೂಲಕ ಭಾರತೀಯ ಕ್ರಿಕೆಟ್ ಭವಿಷ್ಯವು ಸುರಕ್ಷಿತ ಮತ್ತು ಸಮರ್ಥವಾಗಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: U19 ಕ್ರಿಕೆಟ್ ವಿಶ್ವಕಪ್: ವಿಶ್ವವಿಜೇತ ಟೀಂ ಇಂಡಿಯಾದ ಆಟಗಾರರಿಗೆ ಬಿಸಿಸಿಐ 40 ಲಕ್ಷ ರೂ. ನಗದು ಬಹುಮಾನ ಘೋಷಣೆ!
ಆಂಟಿಗುವಾದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯ(U19 Cricket World Cup)ದಲ್ಲಿ ಇಂಗ್ಲೆಂಡ್(England) ವಿರುದ್ಧ 4 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ತಂಡವು 5ನೇ ಬಾರಿಗೆ ವಿಶ್ವ ಚಾಂಪಿಯನ್ ಆಯಿತು. ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 44.5 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 189 ರನ್ ಗಳಿಸಿತು. ಭಾರತ 47.4 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. ಈ ಮೂಲಕ 5ನೇ ಬಾರಿ ವಿಶ್ವ ಚಾಂಪಿಯನ್ ಪಟ್ಟ ಧರಿಸುವ ಮೂಲಕ ದಾಖಲೆ ಬರೆಯಿತು.
Read more
[wpas_products keywords=”deal of the day”]